ನೂತನ ದಂಪತಿಗೆ ಹಾಲು, ಮೊಸರು ಉಡುಗೊರೆ

ದರ ಏರಿಕೆಗೆ ಪ್ರಜ್ಞಾವಂತ ನಾಗರಿಕ ವೇದಿಕೆ ಖಂಡನೆ
The 'Prajnavanta Nagarika Vedike' (Conscious Citizens' Forum) extended their best wishes to the newlywed couple by presenting them with packets of milk and curd as a gift. Jagadish, Jogi Manju, and Doora Rajanna were present.
ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ನೂತನ ದಂಪತಿಗೆ ಹಾಲು ಹಾಗೂ ಮೊಸರಿನ ಪ್ಯಾಕೆಟ್‌ಗಳನ್ನು ಉಡುಗೊರೆಯಾಗಿ ನೀಡಿ ಶುಭಹಾರೈಸಲಾಯಿತು. ಜಗದೀಶ್, ಜೋಗಿ ಮಂಜು, ಜಗದೀಶ್, ದೂರ ರಾಜಣ್ಣ ಇದ್ದರು.
Published on: 

ಹಾಲು ಮತ್ತು ಮೊಸರಿನ ದರ ಏರಿಕೆಯಿಂದ ಜನಸಾಮಾನ್ಯರ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಯತ್ತ ಸರ್ಕಾರದ ಗಮನ ಸೆಳೆಯಲು ಪ್ರಜ್ಞಾವಂತ ನಾಗರಿಕ ವೇದಿಕೆ ವಿನೂತನ ಜಾಗೃತಿ ಅಭಿಯಾನ ನಡೆಸಿತು.

ಕಡಕೋಳದ ಕಲ್ಯಾಣ ಮಂಟಪದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದಂಪತಿಗೆ ಹಾಲು ಹಾಗೂ ಮೊಸರಿನ ಪ್ಯಾಕೆಟ್‌ಗಳನ್ನು ಉಡುಗೊರೆಯಾಗಿ ನೀಡಿ ಶುಭಹಾರೈಸುವ ಮೂಲಕ ಬೆಲೆ ಏರಿಕೆ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ವ್ಯಕ್ತಪಡಿಸಲಾಯಿತು.

ಹಾಲು ಮತ್ತು ಮೊಸರು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯ ವಸ್ತುಗಳಾಗಿದ್ದು, ಇವುಗಳ ಬೆಲೆ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಮತ್ತಷ್ಟು ಹೊರೆ ಹೊರಿಸುವುದು ಸರಿಯಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿವಾಹದ ಸಂಭ್ರಮದಲ್ಲಿ ನಿತ್ಯ ಬಳಕೆಯ ಹಾಲು ಮತ್ತು ಮೊಸರನ್ನೇ ಉಡುಗೊರೆಯಾಗಿ ನೀಡುವ ಮೂಲಕ ಬೆಲೆ ಏರಿಕೆಯ ಬಿಸಿ ಸಾಮಾನ್ಯ ಕುಟುಂಬಗಳ ಬದುಕಿಗೆ ಹೇಗೆ ತಟ್ಟುತ್ತಿದೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು.

ವೇದಿಕೆಯ ಅಧ್ಯಕ್ಷ ಕಡಕೋಳ ಜಗದೀಶ್, ಯುವ ಮುಖಂಡ ಜೋಗಿ ಮಂಜು, ನಗರಪಾಲಿಕೆ ಮಾಜಿ ಸದಸ್ಯ ಜಗದೀಶ್, ದೂರ ರಾಜಣ್ಣ ಸೇರಿದಂತೆ ಹಲವು ಸ್ನೇಹಿತರು ಉಪಸ್ಥಿತರಿದ್ದರು.