ಶೈಕ್ಷಣಿಕ ಮೌಲ್ಯ ಬೆಳೆಸುವಲ್ಲಿ ಪ್ರಾಧ್ಯಾಪಕರ ಪಾತ್ರ ಮಹತ್ವದ್ದು: ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಭಿಮತ

ಮಾನಸ ಗಂಗೋತ್ರಿಯ ಇಎಂಆರ್‌ಸಿ ಸಂಭಾಗಣದಲ್ಲಿ  ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಸಿ.ಗುರುಸಿದ್ದಯ್ಯ ದಂಪತಿಯನ್ನು ಸನ್ಮಾನಿಸಲಾಯಿತು. ಪ್ರೊ.ಎನ್.ಕೆ.ಲೋಕನಾಥ್, ಪ್ರೊ.ರಮೇಶ್, ಪ್ರೊ.ಡಿ.ಆನಂದ್, ಡಾ.ನಿರ್ಮಲ್‌ರಾಜ್ ಇತರರು ಇದ್ದರು.
ಮಾನಸ ಗಂಗೋತ್ರಿಯ ಇಎಂಆರ್‌ಸಿ ಸಂಭಾಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಸಿ.ಗುರುಸಿದ್ದಯ್ಯ ದಂಪತಿಯನ್ನು ಸನ್ಮಾನಿಸಲಾಯಿತು. ಪ್ರೊ.ಎನ್.ಕೆ.ಲೋಕನಾಥ್, ಪ್ರೊ.ರಮೇಶ್, ಪ್ರೊ.ಡಿ.ಆನಂದ್, ಡಾ.ನಿರ್ಮಲ್‌ರಾಜ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ಸಂಶೋಧನಾ ಚಟುವಟಿಕೆಗಳಿಗೆ ಉತ್ತೇಜನ
  • ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೊಡುಗೆ ಗಮನಾರ್ಹವಾಗಿದೆ
ಮೈಸೂರು:ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಆಡಳಿತ ಮತ್ತು ಶೈಕ್ಷಣಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಾಧ್ಯಾಪಕರ ಪಾತ್ರ ಮಹತ್ವದ್ದು. ಇದನ್ನು ಪ್ರೊ.ಸಿ.ಗುರುಸಿದ್ದಯ್ಯ ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು.
ಮಾನಸ ಗಂಗೋತ್ರಿಯ ಇಎಂಆರ್‌ಸಿ ಸಂಭಾಗಣದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಪ್ರೊ.ಸಿ. ಗುರುಸಿದ್ದಯ್ಯ ಅಭಿನಂದನಾ ಸಮಿತಿಯಿಂದ ಆಯೋಜಿಸಿದ್ದ ಅಭಿನಂದನಾ ಸವಾರಂಭದಲ್ಲಿ ವಾತನಾಡಿದರು.
ಶಿಕ್ಷಣ, ಸಂಶೋಧನೆ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಪ್ರೊ.ಸಿ.ಗುರುಸಿದ್ದಂ್ಯು ಅವರು ಸಲ್ಲಿಸಿರುವ ಸೇವೆ ಅಮೂಲ್ಯವಾಗಿದ್ದು, ಅವರ ಸಾಧನೆಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ಛೂರ್ತಿದಾಂುಕವಾಗಿವೆ ಎಂದರು.
ತಮ್ಮ ಸುದೀರ್ಘ ಶೈಕ್ಷಣಿಕ ಜೀವನದಲ್ಲಿ ಶಿಕ್ಷಕ, ಸಂಶೋಧಕ ಮತ್ತು ಆಡಳಿತಗಾರರಾಗಿ ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ಸಂಶೋಧನಾ ಚಟುವಟಿಕೆಗಳಿಗೆ ಉತ್ತೇಜನ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅವರು ನೀಡಿರುವ ಕೊಡುಗೆ ಗಮನಾರ್ಹವಾಗಿದೆ ಎಂದು ಹೇಳಿದರು.
ಪ್ರೊ.ಗುರುಸಿದ್ದಯ್ಯ ಅವರ ಅನುಭವ, ಜ್ಞಾನ ಮತ್ತು ವಾರ್ಗದರ್ಶನ ಮುಂದಿನ ಪೀಳಿಗೆಗೂ ದಾರಿದೀಪವಾಗಲಿದೆ. ಅವರು ಇನ್ನಷ್ಟು ಆರೋಗ್ಯ, ಸಂತೋಷ ಹಾಗೂ ಂುಶಸ್ಸಿನೊಂದಿಗೆ ಸವಾಜ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ‘ಗುರು ಸಂಗಮ’ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಯಿತು. ಮೈಸೂರು ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ಪ್ರೊ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಧ್ಯಾಪಕ ಪ್ರೊ.ಡಿ.ಆನಂದ್, ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ನಿರ್ಮಲ್‌ರಾಜ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net