ನಾಲ್ವಡಿ ಕೊಡುಗೆ ನೀಡದ ಕ್ಷೇತ್ರಗಳೇ ಇಲ್ಲ

ನಾಲ್ವಡಿ ಕೃಷ್ಣರಾಜ ಒಡೆಯರ್
ನಾಲ್ವಡಿ ಕೃಷ್ಣರಾಜ ಒಡೆಯರ್
Published on
ಮೈಸೂರನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ ತಿಳಿಸಿದರು.
ಮೈಸೂರು ಮಲ್ಲಿಗೆ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನಮನ ಕಲಾ ಮಂಟಪದಲ್ಲಿ ಗುರುವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ನಾಲ್ವಡಿ ಅವರು ಕೊಡುಗೆ ನೀಡದ ಕ್ಷೇತ್ರಗಳೇ ಇಲ್ಲ. ಕೃಷಿ, ಕೈಗಾರಿಕೆ, ನೀರಾವರಿ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಅವರು ಕೊಡುಗೆ ನೀಡಿದ್ದಾರೆ ಎಂದರು.
ಸಾಹಿತಿಗಳಾದ ಡಾ.ಎಂ.ಎಸ್.ಶಶಿಕಲಾಗೌಡ, ಎಂ.ಲೋಲಾಕ್ಷಿ, ಡಾ.ಕೆ.ಲೀಲಾಪ್ರಕಾಶ್ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಜಯಪ್ಪ ಹೊನ್ನಾಳಿ, ರೇಖಾ ವೆಂಕಟೇಶ್, ಎಂ.ಎನ್.ಬಾಲಕೃಷ್ಣರಾಜು, ರಾಧಾ ಮಲ್ಲಪ್ಪ, ಡಾ.ನಾ.ಗಂಗಾಧರಪ್ಪ, ಸುಜಾತಾ ಜಯಕುಮಾರ್ ಅವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಇದೇ ವೇಳೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ 30ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net