ಶಿಕ್ಷಣಕ್ಕಿಂತ ಉತ್ತಮ ಸಂಪತ್ತು ಮತ್ತೊಂದಿಲ್ಲ:ಸಿಇಒ ಯುಕೇಶ್ ಕುಮಾರ್ ಅಭಿಮತ

ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಯುಕೇಶ್‌ಕುಮಾರ್,  ಬಿ.ಎಂ.ಸವಿತಾ, ಸಿ.ಪ್ರಕಾಶ್,  ಭೀಮಪ್ಪ ಕೆ. ಲಾಳಿ, ಕೆ.ಪ್ರಭುಸ್ವಾಮಿ, ಸಿದ್ದಗಂಗಮ್ಮ, ದಿಲೀಪ್‌ಕುಮಾರ್, ಖೂಬಾ ಸಿಂಗ್ ಜಾಧವ್, ಮಹೇಶ್ ಇತರರು ಇದ್ದರು.
ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಯುಕೇಶ್‌ಕುಮಾರ್, ಬಿ.ಎಂ.ಸವಿತಾ, ಸಿ.ಪ್ರಕಾಶ್, ಭೀಮಪ್ಪ ಕೆ. ಲಾಳಿ, ಕೆ.ಪ್ರಭುಸ್ವಾಮಿ, ಸಿದ್ದಗಂಗಮ್ಮ, ದಿಲೀಪ್‌ಕುಮಾರ್, ಖೂಬಾ ಸಿಂಗ್ ಜಾಧವ್, ಮಹೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಮ್ಮ ಜೀವನದಲ್ಲಿ ಅನೇಕ ಸಂಪತ್ತನ್ನು ಸೃಷ್ಟಿಸಿಕೊಳ್ಳಬಹುದು. ಆದರೆ ಶಿಕ್ಷಣಕ್ಕಿಂತ ಮಹತ್ವವಾದ ಸಂಪತ್ತು ಬೇರೊಂದಿಲ್ಲ
  • ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಪ್ರಮುಖ ಜವಾಬ್ದಾರಿ
ಮೈಸೂರು:ಶಿಕ್ಷಣಕ್ಕಿಂತ ಉತ್ತಮವಾದ ಸಂಪತ್ತು ಯಾವುದೂ ಇಲ್ಲ. ಹೀಗಾಗಿ ಎಲ್ಲ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಎಸ್.ಯುಕೇಶ್‌ಕುಮಾರ್ ತಿಳಿಸಿದರು.
ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಜೀವನದಲ್ಲಿ ಅನೇಕ ಸಂಪತ್ತನ್ನು ಸೃಷ್ಟಿಸಿಕೊಳ್ಳಬಹುದು. ಆದರೆ ಶಿಕ್ಷಣಕ್ಕಿಂತ ಮಹತ್ವವಾದ ಸಂಪತ್ತು ಬೇರೊಂದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಪ್ರಮುಖ ಜವಾಬ್ದಾರಿ. ಅದರಂತೆ ನಮ್ಮ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕೆಲಸದ ಒತ್ತಡದ ನಡೆವೆಯೂ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ನಾನು ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದೆ. ಪ್ರೌಢಶಾಲಾ ಹಾಗೂ ಕಾಲೇಜಿನ ದಿನಗಳಲ್ಲಿ ಉತ್ತಮ ಅಂಕ ಗಳಿಸಿದ್ದಲ್ಲದೇ ಐಎಎಸ್ ಉತ್ತೀರ್ಣನಾಗಿ ಆಡಳಿತ ತರಬೇತಿಯಲ್ಲೂ ಚಿನ್ನದ ಪದಕ ಪಡೆದಿದ್ದೇನೆ ಎಂದು ಹೇಳಿದರು.
ಎಷ್ಟೋ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ನಿವೃತ್ತರಾಗಿದ್ದಾರೆ. ಅವರ ಮಾರ್ಗದರ್ಶನ ಪಡೆಯಬೇಕು. ನಿವೃತ್ತರಾದವರು ಇನ್ನು ಮುಂದೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ. ನೆಮ್ಮದಿಯ ಬದುಕು ನಿಮ್ಮದಾಗಲಿ ಎಂದು ಹಾರೈಸಿದರು.
ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಮಾತನಾಡಿ, ಆರ್‌ಡಿಪಿಆರ್ ಇಲಾಖೆಯಲ್ಲಿ ಬಹಳಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳಲಾಗುತ್ತಿದ್ದು, ಅದಕ್ಕೆ ತಕ್ಕಂತೆ ಅಧಿಕಾರಿ, ಸಿಬ್ಬಂದಿ ಹೊಂದಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಗಾರ ಸಹಕಾರಿಯಾಗಲಿದೆ. ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುವವರು ತಮ್ಮ ಸೇವಾವಧಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಸಂಘದ ಜಿಲ್ಲಾಧ್ಯಕ್ಷ ಸಿ.ಪ್ರಕಾಶ್ ಮಾತನಾಡಿ, ನಮ್ಮ ಇಲಾಖೆಯ ಅಧಿಕಾರಿಗಳು ಆಧುನಿಕತೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲು ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಪ್ರತಿ ವರ್ಷದಂತೆ ಅಧಿಕಾರಿಗಳ ಮಕ್ಕಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನಡೆಸಿ ಅಭಿನಂದಿಸಲಾಗುತ್ತಿದೆ. ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿಗಳ ಸೇವಾವಧಿ ಗೌರವಿಸಲು ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.
ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಪಿಡಿಒ ಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಕೆ. ಲಾಳಿ, ಮುಖ್ಯ ಯೋಜನಾಧಿಕಾರಿ ಕೆ.ಪ್ರಭುಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಸಂಘದ ಅಧ್ಯಕ್ಷ ದಿಲೀಪ್‌ಕುಮಾರ್, ಕಾರ್ಯಾಧ್ಯಕ್ಷರಾದ ಖೂಬಾ ಸಿಂಗ್ ಜಾಧವ್, ಮಹೇಶ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಿ,ಕೃಷ್ಣ, ಜೆರಾಲ್ಡ್ ರಾಜೇಶ್, ಎಸ್.ರವಿಚಂದ್ರ, ಪ್ರೇಮ್ ಕುಮಾರ್, ಎ.ಎನ್.ರವಿ, ಹೊಂಗಯ್ಯ, ಸುನೀಲ್ ಕುಮಾರ್, ರಂಗಸ್ವಾಮಿ, ಕುಲದೀಪ್, ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್, ಶಿವಕುಮಾರ್, ಸಂಘದ ಗೌರವಾಧ್ಯಕ್ಷ ಎಸ್.ಧರ್ಮೇಂದ್ರ, ಉಪಾಧ್ಯಕ್ಷ ಟಿ.ಎಸ್.ಚಿದಾನಂದ, ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಇಸಾಕ್, ಕೆ.ಜಿ. ಮಹದೇವನಾಯಕ, ಮಹಿಳಾ ಉಪಾಧ್ಯಕ್ಷೆ ಟಿ. ಸೌಮ್ಯಲತಾ, ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪಬಾಯಿ, ರಾಜ್ಯ ಪರಿಷತ್ ಸದಸ್ಯ ಡಿ.ಸಿ.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಜೆ.ಬಸವರಾಜು, ಸಾಂಸ್ಕೃತಿಕ ಕಾರ್ಯದರ್ಶಿ ಜಿ.ಸಿ.ಆಶಾ, ಕ್ರೀಡಾ ಕಾರ್ಯದರ್ಶಿ ಆರ್.ಕೆ.ಚಿದಾನಂದಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net