ಜನಸೇವೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಾರ್ಥಕ 50 ವರುಷ ಪೂರೈಸಿದ್ದು, ಇದಕ್ಕಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತೂರು ಮಠದ ಸ್ವಾಮೀಜಿಯನ್ನು ಭೇಟಿ ಮಾಡಿ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದು, ಕಾರ್ಯಕ್ರಮಕ್ಕೆ ಬರಲು ಸ್ವಾಮೀಜಿ ಒಪ್ಪಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.