

ನಂಜನಗೂಡು: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಓಂಕಾರ್ ಅರಣ್ಯ ವಲಯದ ಸರಹದ್ದಿನ ನಂಜನಗೂಡು ತಾಲೂಕಿನ ಬಳ್ಳೂರುಂಡಿ ಗ್ರಾಮದ ಮಹಾದೇವಯ್ಯ ಎಂಬುವರ ಜಮೀನಿನಲ್ಲಿ ಬುಧವಾರ ಮಧ್ಯಾಹ್ನ ಹುಲಿ ಕಾಣಿಸಿಕೊಂಡಿದೆ.
ಈ ವೇಳೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ದೃಶ್ಯವನ್ನು ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿ ಸಂಜೆ 6.30ಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.