ಮೈಸೂರು ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ

ಹುಲಿ
ಹುಲಿ
Published on

ಪ್ರಮುಖ ಮುಖ್ಯಾಂಶಗಳು

  • ಆಟೋಮೇಟಿವ್ ಆಕ್ಸಲ್ಸ್ ಕಾರ್ಖಾನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆ
  • ಜನರಲ್ಲಿ ಭಯ, ಆತಂಕ ಸೃಷ್ಟಿ
ಮೈಸೂರು: ಬಿಇಎಂಎಲ್ (ಬೆಮೆಲ್) ಆವರಣದೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಹುಲಿ ಈಗ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯಕ್ಷವಾಗಿ ಭಯ ಉಂಟುಮಾಡಿದೆ. 
ಆಟೋಮೇಟಿವ್ ಆಕ್ಸಲ್ಸ್ ಕಾರ್ಖಾನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಹುಲಿಯೊಂದು ಓಡಾಡಿರುವ ದೃಶ್ಯ ಸೆರೆಯಾಗಿದ್ದು, ಈ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದೆ. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ತಪಾಸಣೆ ನಡೆಸಿ ಕಾಖಾನೆ ಆವರಣದಲ್ಲಿ ಕಾರ್ಮಿಕರು ಅನಗತ್ಯವಾಗಿ ಓಡಾಡದಂತೆ ಎಚ್ಚರವಹಿಸುವ ಜತೆಗೆ ರಾತ್ರಿ ಜನ ಓಡಾಡುವ ಮಾರ್ಗದಲ್ಲಿ ಹೆಚ್ಚುವರಿ ಬೆಳಕಿನ ವ್ಯವಸ್ಥೆ ಕಲ್ಪಿಸಿದೆ.
ವಿಷಯ ತಿಳಿದು ಕಾರ್ಖಾನೆಗೆ ಭೇಟಿ ಕೊಟ್ಟಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಖಾನೆ ಆವಣದಲ್ಲಿನ ವಿವಿಧ ಜಾಗದಲ್ಲಿ ಕ್ಯಾಮರಾ ಟ್ರ್ಯಾಪ್ ಅಳವಡಿಸಿದ್ದಾರೆ. ಆದರೆ ಶನಿವಾರ ಮತ್ತು ಭಾನುವಾರ ಹುಲಿಯ ಸುಳಿವು ಲಭ್ಯವಾಗಿಲ್ಲ ಎಂದು ಡಿಸಿಎಫ್ ಪರಮೇಶ್ ತಿಳಿಸಿದ್ದಾರೆ.
ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಹುಲಿಯ ಚಿತ್ರ ಅಸ್ಪಷ್ಟವಾಗಿದ್ದು, ಬೆಮೆಲ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡಿದ್ದು, ಇದೆ ಹುಲಿಯಾ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಒಟ್ಟಾರೆ ಕೂರ್ಗಳ್ಳಿ ಮತ್ತು ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಹುಲಿ ಸಂಚಾರ ನಡೆಸುತ್ತಿರುವುದು ಕಂಡುಬಂದಿದ್ದು, ಸೆರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net