ಮೈಸೂರಿನ ಅಭಿವೃದ್ಧಿಗೆ ಕೇಂದ್ರದಿಂದ ಸಹಕಾರ: ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ

ವಿಶ್ವ ಪರಿಸರ ದಿನದ ಅಂಗವಾಗಿ ಬಿಜೆಪಿ ನಗರ ಘಟಕದಿಂದ ಕಾರಂಜಿಕೆರೆ ಆವರಣದಲ್ಲಿ ಗಿಡ ನೆಡಲಾಯಿತು. ಗಜೇಂದ್ರ ಸಿಂಗ್ ಶೇಖಾವತ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಲ್.ನಾಗೇಂದ್ರ, ಎಂ.ಸುಬ್ಬಣ್ಣ, ಶಿವಕುಮಾರ್, ಸಂದೇಶ್‌ಸ್ವಾಮಿ, ಶೈಲೇಂದ್ರ, ದಿನೇಶ್‌ಗೌಡ ಇತರರು ಇದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ಬಿಜೆಪಿ ನಗರ ಘಟಕದಿಂದ ಕಾರಂಜಿಕೆರೆ ಆವರಣದಲ್ಲಿ ಗಿಡ ನೆಡಲಾಯಿತು. ಗಜೇಂದ್ರ ಸಿಂಗ್ ಶೇಖಾವತ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಲ್.ನಾಗೇಂದ್ರ, ಎಂ.ಸುಬ್ಬಣ್ಣ, ಶಿವಕುಮಾರ್, ಸಂದೇಶ್‌ಸ್ವಾಮಿ, ಶೈಲೇಂದ್ರ, ದಿನೇಶ್‌ಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೈಸೂರು ಪ್ರವಾಸೋದ್ಯಮದ ಅಭಿವೃದ್ಧಿಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಸಹಕಾರ ನೀಡಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಾಗುವುದು
  • ಪರಿಸರ ಸಂರಕ್ಷಣೆ ಎಂಬುದು ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ, ಅದಕ್ಕೆ ಎಲ್ಲರ ಸಹಕಾರ ಮುಖ್ಯ
ಮೈಸೂರು:ಸುಂದರವಾದ ಮೈಸೂರು ನಗರವನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಅಗತ್ಯ ಸಹಕಾರ ನೀಡಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಬಿಜೆಪಿ ನಗರ ಘಟಕದಿಂದ ಕಾರಂಜಿ ಕೆರೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈಸೂರು ಪ್ರವಾಸೋದ್ಯಮದ ಅಭಿವೃದ್ಧಿಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಸಹಕಾರ ನೀಡಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಾಗುವುದು. ಪರಿಸರ ಸಂರಕ್ಷಣೆ ಎಂಬುದು ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ, ಅದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕೇಂದ್ರ ಸಚಿವರು ಕಾರಂಜಿಕೆರೆಯಲ್ಲಿ ದೇಸಿಯ ತಳಿಯ ಗಿಡಗಳನ್ನು ನೆಟ್ಟಿದ್ದಾರೆ. ಮೈಸೂರಿನ ಅಭಿವೃದ್ಧಿಗೆ ಈಗಾಗಲೇ ಹಲವು ಅನುದಾನ ನೀಡಿದ್ದಾರೆ. ರಾಜ್ಯ ಸರ್ಕಾರದ ಯಡವಟ್ಟಿನಿಂದಾಗಿ ಪ್ರವಾಸೋದ್ಯಮದ ಮಾಲ್ ಕೆಲಸ ಅರ್ಧಕ್ಕೆ ನಿಂತಿದೆ. ಚಾಮುಂಡಿ ಬೆಟ್ಟದ ಅಭಿವೃದ್ಧಿ ಕೆಲಸವೂ ಅರ್ಧಕ್ಕೆ ನಿಂತಿದೆ. ಆದರೆ ಕಾರಂಜಿಕೆರೆ ಮುಂದುವರಿದ ಕಾಮಗಾರಿಗೆ ಅನುದಾನಕ್ಕೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ಅಂಬಾರಿಯನ್ನು ಹೊರುತ್ತಿದ್ದ ಕಾಡಾನೆ ದಾಳಿಗೆ ತುತ್ತಾದ ಅರ್ಜುನನ ಸ್ಮಾರಕ ಹಾಗೂ ವೃತ್ತ ನಿರ್ಮಾಣಕ್ಕೆ ಮನವಿ ಮಾಡಿದ್ದೇನೆ. ಜತೆಗೆ ಮಡಿಕೇರಿಯ ಕೋಟೆ ಈಗಾಗಲೇ ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆಯಾಗಿದೆ. ಅದರ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಕೋರಿದರು.
ಆನೆ ದಾಳಿಗೆ ಮಡಿಕೇರಿಯಲ್ಲಿ ಮತ್ತೊಬ್ಬರು ಸಾವಿಗೀಡಾಗಿರುವುದು ಬೇಸರದ ಸಂಗತಿ. ಇದೇ ಕಾರಣಕ್ಕಾಗಿ ಮಡಿಕೇರಿ, ಮೈಸೂರು ಭಾಗದಲ್ಲಿ ಆನೆಗಳ ಸಮೀಕ್ಷೆ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಪೆಟ್ರೋಲಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ ಹಾಗೂ ಎಸ್ಟೇಟ್‌ಗಳಲ್ಲಿ ಅರಣ್ಯ ಇಲಾಖೆ ನಿಯಮ ಪಾಲನೆ ಮಾಡುವ ಕೆಲಸ ಆಗಬೇಕಿದೆ. ಇದೆಲ್ಲವನ್ನೂ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದೇನೆ ಎಂದರು.
ರಾಜ್ಯ ಸರ್ಕಾರಕ್ಕೆ ಐದು ವರ್ಷ ಕರ್ತವ್ಯ ಮಾಡಲು ಅಧಿಕಾರ ನೀಡಿದ್ದಾರೆ. ಆದರೆ ಎರಡು ದಿನಕ್ಕೆ ಹೀಗೆ ರಾಜೀನಾಮೆ ನೀಡಿರುವುದು ಅವರಲ್ಲಿನ ಭಿನ್ನಮತವನ್ನು ತೋರಿಸುತ್ತದೆ. ಅದೆಲ್ಲವನ್ನೂ ಬದಿಗೊತ್ತಿ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿ ಎಂದು ಹೇಳಿದರು.
ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಎಂ.ಸುಬ್ಬಣ್ಣ, ಮಾಜಿ ಮೇಯರ್‌ಗಳಾದ ಶಿವಕುಮಾರ್, ಸಂದೇಶ್‌ಸ್ವಾಮಿ, ಮಾಜಿ ಉಪ ಮೇಯರ್ ಶೈಲೇಂದ್ರ, ಚಾಮರಾಜ ಕ್ಷೇತ್ರದ ಮುಖಂಡ ದಿನೇಶ್‌ಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net