ಅಧ್ಯಕ್ಷತೆ ವಹಿಸಿದ್ದ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಹೆಚ್ಚುತ್ತಿರುವ ವಲಸೆ ಪರಿಣಾಮ ನಗರೀಕರಣ ವೇಗವಾಗುತ್ತಿದೆ. ಪರಿಣಾಮ ನಗರದಲ್ಲಿ ಸಂಚಾರ ದಟ್ಟಣೆ, ರಸ್ತೆ ಮತ್ತು ಮೂಲಸೌಕರ್ಯಗಳ ಮೇಲಿನ ಒತ್ತಡ ಹೆಚ್ಚುತ್ತಿದ್ದು, ನಗರ ಜೀವನ ಹೆಚ್ಚು ಸಂಕೀರ್ಣವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.