

ಹನಗೋಡು: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಭರವಸೆ ನೀಡಿದಂತೆ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಹಳ್ಳಿ-ಅಡಿಗನಹಳ್ಳಿ ಮಾರ್ಗದಲ್ಲಿ ಗುರವಾರದಿಂದ ಬಸ್ ಸಂಚಾರ ಆರಂಭಗೊಂಡಿದೆ.
ಹೋಬಳಿಯ ಅರಸು ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಅಡಿಗನಹಳ್ಳಿ, ಕಲ್ಲಹಳ್ಳಿ, ನಾಗಮಂಗಲ, ಹುಣಸೇಗಾಲ ಹಾಗೂ ಅತ್ತಿಕುಪ್ಪೆ ಮಾರ್ಗದಲ್ಲಿ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನ ಸೆಳೆದಿದರು.