ಅರಸು ಕಲ್ಲಹಳ್ಳಿ ವ್ಯಾಪ್ತಿಯಲ್ಲಿ ಸಾರಿಗೆ ಸೇವೆ

ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿ-ಅಡಿಗನಹಳ್ಳಿ ಮಾರ್ಗಕ್ಕೆ ಬಸ್ ಸಂಚಾರ ಆರಂಭಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂಭ್ರಮಿಸಿದರು. ಮಹದೇವಪ್ಪ, ಪ್ರಸನ್ನ, ಕೌಶಿಕ್, ಗಣೇಶ್ ಇದ್ದರು.
ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿ-ಅಡಿಗನಹಳ್ಳಿ ಮಾರ್ಗಕ್ಕೆ ಬಸ್ ಸಂಚಾರ ಆರಂಭಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂಭ್ರಮಿಸಿದರು. ಮಹದೇವಪ್ಪ, ಪ್ರಸನ್ನ, ಕೌಶಿಕ್, ಗಣೇಶ್ ಇದ್ದರು.
Published on

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಭರವಸೆ ನೀಡಿದಂತೆ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಹಳ್ಳಿ-ಅಡಿಗನಹಳ್ಳಿ ಮಾರ್ಗದಲ್ಲಿ ಗುರವಾರದಿಂದ ಬಸ್ ಸಂಚಾರ ಆರಂಭಗೊಂಡಿದೆ.

ಹೋಬಳಿಯ ಅರಸು ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಅಡಿಗನಹಳ್ಳಿ, ಕಲ್ಲಹಳ್ಳಿ, ನಾಗಮಂಗಲ, ಹುಣಸೇಗಾಲ ಹಾಗೂ ಅತ್ತಿಕುಪ್ಪೆ ಮಾರ್ಗದಲ್ಲಿ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನ ಸೆಳೆದಿದರು.
ಸಭೆಯಲ್ಲಿಯೇ ಈ ಸಮಸ್ಯೆಗೆ ಸ್ಪಂದಿಸಿದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರಕ್ಕೆ ಶಿಫಾರಸು ಮಾಡಿತು. ಅದರಂತೆ ನಾಳೆ(ಗುರುವಾರ)ಯಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು.
ಭರವಸೆಯಂತೆ ತಕ್ಷಣ ಕ್ರಮ ಕೈಗೊಂಡ ಪರಿಣಾಮ ಗುರುವಾರದಿಂದಲೇ ಈ ಮಾರ್ಗದಲ್ಲಿ ಬಸ್ ಸಂಚಾರ ಆರಂಭಗೊಂಡಿದ್ದು, ಕಲ್ಲಹಳ್ಳಿ ಗ್ರಾಮಸ್ಥರು ಸಂಭ್ರಮಿಸಿದರು. ಈ ವೇಳೆ ಗ್ರಾಮದ ಮುಖಂಡರಾದ ಮಹದೇವಪ್ಪ, ಪ್ರಸನ್ನ, ಕೌಶಿಕ್, ಗಣೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net