ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯ ಜತೆಗೆ ಔಷಧ ಕೊರತೆಯೂ ಕಂಡುಬಂದಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಆರೋಗ್ಯ ಇಲಾಖೆ ಆಯುಕ್ತರಿಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಪತ್ರ ವ್ಯವಹಾರ ನಡೆಸುವುದಾಗಿ ತಿಳಿಸಿದರು. ಗುತ್ತಿಗೆ ನೌಕರರಿಗೆ ಕಳೆದ ಎರಡು ತಿಂಗಳಿಂದ ಸಂಬಳವಾಗಿಲ್ಲ ಎಂದು ಕೆಲವು ನರ್ಸ್‌ಗಳು ಮನವಿ ಮಾಡಿದರು.