ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಇಬ್ಬರ ಬಂಧನ

ತಿ.ನರಸೀಪುರ ಪಟ್ಟಣ ಹಾಗೂ ತಿರುಮಕೂಡಲು ಗ್ರಾಮದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ತಿ.ನರಸೀಪುರ ಪಟ್ಟಣ ಹಾಗೂ ತಿರುಮಕೂಡಲು ಗ್ರಾಮದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • illegally refilling gas
ತಿ.ನರಸೀಪುರ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳಿಂದ ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಿ.ನರಸೀಪುರ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬುಧವಾರ ರಾತ್ರಿ ಬಂಧಿಸಿದ್ದಾರೆ.
ಆಹಾರ ಇಲಾಖೆಯ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ತಿ.ನರಸೀಪುರ ಪಟ್ಟಣದ ಹೊಸತಿರುಮಕೂಡಲು ಪ್ರದೇಶದಲ್ಲಿರುವ ಮನೆ ಹಾಗೂ ಪಟ್ಟಣದ ಶ್ರೀರಾಂಪುರ ಬೀದಿಯ ರೈಸ್ ಮಿಲ್ ಪಕ್ಕದ ಗೋಡೌನ್ ಒಂದರ ಮೇಲೆ ಬುಧವಾರ ಸಂಜೆ ದಾಳಿ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ, ಆರೋಪಿಗಳು ಯಾವುದೇ ಅಧಿಕೃತ ಅನುಮತಿ ಇಲ್ಲದೆ ಗೃಹಬಳಕೆಯ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಬಳಸಿ ಅಕ್ರಮವಾಗಿ ರೀಫಿಲಿಂಗ್ ನಡೆಸುತ್ತಿದ್ದದ್ದು ಬೆಳಕಿಗೆ ಬಂದಿದೆ. ಒಂದು ಕೆ.ಜಿ. ಗ್ಯಾಸ್‌ಗೆ 100 ರೂ. ನಂತೆ ಹಣ ಪಡೆದು ರೀಫಿಲಿಂಗ್ ಮಾಡುತ್ತಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರನ್ನು ಹೊಸ ತಿರುಮಕೂಡಲು ನಿವಾಸಿ ಉಮೇಶ್ (37), ಹಾಗೂ ಶ್ರೀರಾಂಪುರ ಬೀದಿಯ ಖಲಂದರ್ ಪಾಷ ಲೇ ಅಬ್ದುಲ್ ಏಜಾಜ್ ಪಾಷ ಎಂದು ಗುರುತಿಸಲಾಗಿದೆ.
ಈ ಸಂಬಂಧ ಆರೋಪಿಗಳ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ಹಾಗೂ ಎಲ್‌ಪಿಜಿ ಸರಬರಾಜು ಮತ್ತು ವಿತರಣಾ ನಿಯಂತ್ರಣ ಕಾಯ್ದೆ ಅಡಿಯಲ್ಲಿ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net