ಕೇರಳ ಲಾಟರಿ ಮಾಡುತ್ತಿದ್ದ ಇಬ್ಬರ ಸೆರೆ

ಕೇರಳ ಲಾಟರಿ ಮಾಡುತ್ತಿದ್ದ ಇಬ್ಬರ ಸೆರೆ
ಕೇರಳ ಲಾಟರಿ ಮಾಡುತ್ತಿದ್ದ ಇಬ್ಬರ ಸೆರೆ
Published on

ಪ್ರಮುಖ ಮುಖ್ಯಾಂಶಗಳು

  • ಸರಗೂರಿನಲ್ಲಿ ಮತ್ತೊಬ್ಬ ಪರಾರಿ
ಸರಗೂರು: ಪಟ್ಟಣದಲ್ಲಿ ಕೇರಳ ರಾಜ್ಯದ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಮಂಜುನಾಥ ಅ.ತರಕಾರಿ ಮಂಜು ಹಾಗೂ ಮೊಬೈಲ್ ಅಂಗಡಿ ಮಾಲೀಕ ರವಿ ಹಂಚೀಪುರ ಬಂಧಿತರು. ಮತ್ತೊಬ್ಬ ಪರಾರಿಯಾಗಿದ್ದಾನೆ. 50 ರೂ. ಮುಖಬೆಲೆಯ 80 ಕೇರಳ ಲಾಟರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ಲಾಟರಿ ಟಿಕೆಟ್ ಖರೀದಿ ಮಾಡುತ್ತಿದ್ದ ಜನರು ಓಡಿಹೋಗಿದ್ದು, ಈತ ಬೈಕ್ ತೆಗೆದುಕೊಂಡು ಹೋಗಲು ಯತ್ನಿಸಿದಾಗ ಸಿಕ್ಕಿಕೊಂಡಿದ್ದಾನೆ. ಮೊಬೈಲ್ ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ರವಿ ಹಂಚೀಪುರನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಮೊಬೈಲ್ ಅಂಗಡಿ ಮಾಲೀಕ ರಮೇಶ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಜುವಿನಿಂದ ಬೈಕ್ ಹಾಗೂ ಲಾಟರಿ ಟಿಕೆಟ್ ವಶಪಡಿಸಿಕೊಂಡು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net