ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಸಿಪಿಐ ಚಂದ್ರಶೇಖರ್, ಕವಲಂದೆ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜು, ಎಸ್.ಬಿ ರಮೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆದಿರುವ ಕವಲಂದೆ ಠಾಣೆ ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.