ನಗರದ ಚಾಮುಂಡಿಬೆಟ್ಟದ ತಪ್ಪಲಿನ ಶ್ರೀ ಸುತ್ತೂರು ಮಠದಲ್ಲಿ ಗುರುವಾರ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ 15ನೇ ವಿಶೇಷ ಉಪನ್ಯಾಸದ ಬಳಿಕ ಆಯೋಜಿಸಿದ್ದ ಪ್ರಶ್ನೋತರದಲ್ಲಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಕೆಲವೊಂದು ನಿರ್ಧಾರಗಳು ಅನುಷ್ಠಾನಗೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಆದರೆ, ನಾವು ತಾಳ್ಮೆಯಿಂದ ಇರಬೇಕಷ್ಟೆ. ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಯಾವುದೇ ನಿರ್ಧಾರದ ಹಿಂದೆ ದೇಶದ 142 ಕೋಟಿ ಜನರ ಅಭಿಪ್ರಾಯವೂ ಮುಖ್ಯ. ಹಾಗಾಗಿ ಏಕರೂಪ ನಾಗರಿಕ ಸಂಹಿತೆ ದೇಶಾದ್ಯಂತ ಜಾರಿಯಾಗದೆ ಇರುವ ವಿಚಾರದಲ್ಲಿ ಆತಂಕಿತರಾಗುವ ಅವಶ್ಯಕತೆ ಇಲ್ಲ ಎಂದರು.