ಮೈಸೂರು ರೈಲು ನಿಲ್ದಾಣದ ಬಹುಕಾಲದ ನಿರೀಕ್ಷೆಯ ತೃತೀಯ ಪ್ರವೇಶ ದ್ವಾರ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ತಕ್ಷಣದ ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆ ನೀಡುವಂತೆ ಇತ್ತೀಚೆಗೆ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಚೆನ್ನೈ -ಮೈಸೂರು ಹೈಸ್ಪೀಡ್ ರೈಲು (ಬುಲೆಟ್ ಟ್ರೈನ್) ಸಂಪರ್ಕವನ್ನು ವಿಸ್ತರಿಸುವ ಸಾಧ್ಯತೆಯನ್ನು ಪರಿಗಣಿಸುವಂತೆ ಕೋರಿದ್ದಾರೆ. ಅಲ್ಲದೆ, ಶೈಕ್ಷಣಿಕ, ಪ್ರವಾಸೋದ್ಯಮ ಹಾಗೂ ಆರ್ಥಿಕ ಕೇಂದ್ರವಾಗಿ ಬೆಳೆಯುತ್ತಿರುವ ಮೈಸೂರಿಗೆ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ರೈಲ್ವೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.