ಕುಡಿಯುವ ನೀರನ್ನು ಮಿತವಾಗಿ ಬಳಸಿ

ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಎಚ್.ಎಸ್ ಮಾತನಾಡಿದರು.
ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಎಚ್.ಎಸ್ ಮಾತನಾಡಿದರು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ವಿಶೇಷ ಗ್ರಾಮ ಸಭೆ ನಡೆಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರವಿ ಮಾತನಾಡಿ, ಅಂತರ್ಜಲ ಕಡಿಮೆಯಾಗಿ ನೀರು ಕಲುಷಿತವಾದಾಗ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಪ್ರತಿ ಬಾರಿ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಿದರೆ ಸರಿಯಾಗಲಿದೆ. ಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು. ವಾಟರ್‌ಮನ್ ವಾಲ್ವ್ ಪಾಯಿಂಟ್ ಸ್ಥಳಗಳಲ್ಲಿ ಹಾಗೂ ನೀರಿನ ಟ್ಯಾಂಕ್ ಸುತ್ತಮುತ್ತ ಸ್ವಚ್ಛವಾಗಿ ಇಟ್ಟುಕೊಂಡು ಎಲ್ಲಿಯೂ ಲೀಕೇಜ್ ಇಲ್ಲದಂತೆ ನೋಡಿಕೊಳ್ಳುವಂತೆ ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ ಶ್ರೀದೇವಿ, ಕಾರ್ಯದರ್ಶಿ ಕುಮಾರ್, ಬಿಲ್ ಕಲೆಕ್ಟರ್ ರಮಣಯ್ಯ, ಕ್ಲರ್ಕ್ ಮಹೇಂದ್ರ ಸೇರಿದಂತೆ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net