ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೌಲಭ್ಯ ಬಳಸಿಕೊಳ್ಳಿ

ನಂಜನಗೂಡು: ತಾಲೂಕಿನ ಕಾರೆಪುರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಮ್ಮ ಜ್ಞಾನ ವಿಕಾಸ ಕೇಂದ್ರದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಶಿವಣ್ಣ ಉದ್ಘಾಟಿಸಿದರು. ಶಮಾ, ಲೋಹಿತ್ ಇತರರಿದ್ದರು.
ನಂಜನಗೂಡು: ತಾಲೂಕಿನ ಕಾರೆಪುರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಮ್ಮ ಜ್ಞಾನ ವಿಕಾಸ ಕೇಂದ್ರದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಶಿವಣ್ಣ ಉದ್ಘಾಟಿಸಿದರು. ಶಮಾ, ಲೋಹಿತ್ ಇತರರಿದ್ದರು.
Published on

ಮಹಿಳೆಯರಿಗೆ ಕಾರೆಪುರ ಗ್ರಾಮದ ಹಿರಿಯ ಮುಖಂಡ ಶಿವಣ್ಣ ಕರೆ

ನಂಜನಗೂಡು: ತಾಲೂಕಿನ ಕಾರೆಪುರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಮ್ಮ ಜ್ಞಾನ ವಿಕಾಸ ಕೇಂದ್ರದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಶಿವಣ್ಣ ಉದ್ಘಾಟಿಸಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ದೊರೆಯುವ ವಿವಿಧ ಸೌಲಭ್ಯಗಳನ್ನು ಮಹಿಳಾ ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ಯೋಜನೆಯಿಂದ ದೊರೆಯುವ ಮಾಹಿತಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಯೋಜನೆಯ ವಲಯ ಮೇಲ್ವಿಚಾರಕ ಲೋಹಿತ್ ಮಾತನಾಡಿ, ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಮಹಿಳೆಯರ ಮನರಂಜನೆಗಾಗಿ ವಿಶೇಷ ಕಾರ್ಯಕ್ರಮಗಳ ಜತೆಗೆ ಸ್ವಯಂಪ್ರೇರಣಾ ಶಿಬಿರ ಸೇರಿದಂತೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಪ್ರಯೋಜನವನ್ನು ಎಲ್ಲ ಸದಸ್ಯರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಾರ್ಷಿಕೋತ್ಸವದ ಅಂಗವಾಗಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಶಮಾ, ಸೇವಾ ಪ್ರತಿನಿಧಿ ವಸಂತ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net