ಕಾಲು ಬಾಯಿ ರೋಗ ತಡೆಗೆ ಲಸಿಕೆಯೇ ಮಾರ್ಗ

ಪಿರಿಯಾಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ  ನಿತಿನ್ ವೆಂಕಟೇಶ್, ಗ್ರಾಪಂ ಅಧ್ಯಕ್ಷ ಲೋಕೇಶ್, ಡಿ.ಟಿ.ಸ್ವಾಮಿ, ರಾಜಣ್ಣ, ಧನರಾಜ್, ಅನಿಲ್ ಕುಮಾರ್,ಲೋಕೇಶ್ ಇತರರು ಇದ್ದರು.
ಪಿರಿಯಾಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಗ್ರಾಪಂ ಅಧ್ಯಕ್ಷ ಲೋಕೇಶ್, ಡಿ.ಟಿ.ಸ್ವಾಮಿ, ರಾಜಣ್ಣ, ಧನರಾಜ್, ಅನಿಲ್ ಕುಮಾರ್,ಲೋಕೇಶ್ ಇತರರು ಇದ್ದರು.
Published on
ಬೈಲುಕುಪ್ಪೆ: ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆ ಹಾಕಿಸುವುದೊಂದೇ ಮಾರ್ಗ. ಹಾಗಾಗಿ ರೈತರು ತಾವು ಸಾಕುವ ಎಲ್ಲ ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ 8ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾನುವಾರುಗಳನ್ನು ರೋಗದಿಂದ ಪೂರ್ಣ ರಕ್ಷಿಸಲು ವರ್ಷದಲ್ಲಿ ಕನಿಷ್ಠ 2 ಬಾರಿ ಲಸಿಕೆ ಹಾಕಿಸುವುದು ಅಗತ್ಯ. ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಸರ್ಕಾರ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡುತ್ತದೆ. ಕಾಲುಬಾಯಿ ಲಸಿಕೆ ಹಾಕುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಈ ಬಗ್ಗೆ ಕೇಂದ್ರ ಸರ್ಕಾರವು ನಮ್ಮ ಇಲಾಖೆ ಕಾರ್ಯಕ್ರಮವನ್ನು ಪ್ರಶಂಶಿಸಿ ಪ್ರಶಸ್ತಿ ನೀಡಿ ಗೌರವಿಸಿದೆ. ಪಶು ಇಲಾಖೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಮನೆಗೆ ಬಂದು ಲಸಿಕೆ ನೀಡುತ್ತಾರೆ. ಅವರಿಗೆ ಅಗತ್ಯ ಸಹಕಾರ ನೀಡಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.
ಹೈನುಗಾರಿಕೆ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ: ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಹೈನುಗಾರಿಕೆ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ. ಈ ಹಿಂದೆ ರಾಜ್ಯದಲ್ಲಿ 64 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ನಮ್ಮ ಸರ್ಕಾರ ಬಂದ ನಂತರ ರೈತರಿಗೆ ಹಾಲಿ ದರ ಲೀಟರ್‌ಗೆ  7 ರೂ. ಹೆಚ್ಚಿಸಿದ್ದರಿಂದ 65 ಲಕ್ಷ ಲೀಟರ್ ಸರಬರಾಜಾಗುತ್ತಿದ್ದ ಹಾಲು ಈಗ 1 ಕೋಟಿ ಲೀಟರ್ ದಾಟಿದೆ. ಇದರಲ್ಲಿ 60 ಲಕ್ಷ ಲೀಟರ್  ಹಾಲನ್ನು ಮಾರಾಟ ಮಾಡಲಾಗುತ್ತಿದೆ. ಉಳಿದ 40 ಲಕ್ಷ ಲೀ., ಹಾಲನ್ನು ಸಿಹಿ ತಿನಿಸುಗಳ ತಯಾರಿಕೆಗಾಗಿ ಬಳಸಲಾಗುತ್ತಿದೆ. ಹಿಂದೆ 740 ಟನ್ ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ತಯಾರಿಸುತ್ತಿದ್ದ ನಂದಿನಿಗೆ ಬೇಡಿಕೆ ಹೆಚ್ಚಾಗಿ ಇಂದು 1080 ಲಕ್ಷ ಟನ್ ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳ ತಯಾರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. 
ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರ: ಈ ಭಾಗದ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ  ಮಾಡುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿರುವ ಬಂಡೂರು ಕುರಿ ತಳಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ತಳಿಯು ಉತ್ತಮವಾಗಿದ್ದು, ಪ್ರತಿ ಕುರಿ, ಟಗರಿನಿಂದ ಸುಮಾರು 40 ರಿಂದ 50 ಕೆಜಿ ಮಾಂಸ ದೊರೆಯಲಿದೆ. ಹಾಗಾಗಿ ಇದನ್ನು ಅಭಿವೃದ್ಧಿಪಡಿಸಿ, ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ತಾಲೂಕಿನ ಕಂಪಲಾಪುರ ಬಳಿ 50 ಎಕರೆ ಜಾಗವನ್ನು ಗುರುತಿಸಿ ರೂ. 1 ಕೋಟಿ ಅನುದಾನವನ್ನು ಮಂಜೂರು ಮಾಡಿ 50 ಲಕ್ಷ ರೂ. ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು. 
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ನಾಗರಾಜ್ ಮಾತನಾಡಿ, ಜಾನುವಾರಗಳು ದೇಶದ ಮತ್ತು ರೈತನ ಆಸ್ತಿ. ಇವುಗಳನ್ನು ಸಂರಕ್ಷಿಸುವ ಹೊಣೆ ನಮ್ಮದಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ 6ತಿಂಗಳಿಗೊಮ್ಮೆ ಸರ್ಕಾರ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೆ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಿಸರ್ಗ ಪ್ರಿಯಾ, ತಾಪಂ ಇಒ ಸುನಿಲ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಶುಪಾಲನಾ ಇಲಾಖೆ ನಿರ್ದೇಶಕ ಪಿ.ಶ್ರೀನಿವಾಸ್, ಅಪರ ನಿರ್ದೇಶಕ ಶಿವರುದ್ರಪ್ಪ, ಜಂಟಿ ನಿರ್ದೇಶಕ ಡಾ.ರಮೇಶ್, ವಿಭಾಗೀಯ ನಿರ್ದೇಶಕ ಶಿವಣ್ಣ,  ಸಹಾಯಕ ನಿರ್ದೇಶಕ ಸೋಮಯ್ಯ, ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ.ರಮೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಮುಖಂಡರಾದ ಧನರಾಜ್,  ಶಿಲ್ಪಾ, ಶೇಖರ್, ರಾಮಚಂದ್ರ, ಮುಕ್ಮುಲ್, ರಿಯಾಜ್, ಅಸ್ಲಾಂ ಪಾಷಾ ಇತರರು ಇದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net