ಪ್ರಥಮದರ್ಜೆ ಕಾಲೇಜಿನಲ್ಲಿ ವಿವಿಧ ಕೋರ್ಸ್‌ಗಳು ಲಭ್ಯ

Principal Prof. Nanjjundswamy Briefed
Principal Prof. Nanjjundswamy Briefed
Published on
ಪಿರಿಯಾಪಟ್ಟಣ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ವಿವಿಧ ಪದವಿ ಕೋರ್ಸ್‌ಗಳು ಲಭ್ಯವಿವೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ನಂಜುಂಡಸ್ವಾಮಿ ತಿಳಿಸಿದ್ದಾರೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಕಾಂ., ಬಿ.ಸಿ.ಎ ಮತ್ತು ಬಿ.ಬಿ.ಎ ಕೋರ್ಸ್‌ಗಳಿದ್ದು 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದೆ. 1991-92ನೇ ಸಾಲಿನಲ್ಲಿ ಪ್ರಾರಂಭವಾಗಿರುವ ಈ ಕಾಲೇಜು ಈವರೆಗೆ ಯಶಸ್ವಿಯಾಗಿ ನಡೆದುಬಂದಿದ್ದು ಇಲ್ಲಿ ವ್ಯಾಸಂಗ ಮಾಡಿದ ಹಲವು ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತಂದಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ಕಾಲೇಜಿನಲ್ಲಿ ಉತ್ತಮ ಸಾಧನೆ ತೋರುವ 15 ವಿದ್ಯಾರ್ಥಿಗಳಿಗೆ ಶ್ರೀ ಗೌರಿಶಂಕರ ಚಾರಿಟಬಲ್ ಟ್ರಸ್ಟ್ ವತಿಯಿಂದ ತಲಾ 4 ಸಾವಿರ ರೂ.ನಂತೆ ಪ್ರತಿವರ್ಷ ಒಟ್ಟು 60 ಸಾವಿರ ರೂ.ಗಳನ್ನು ಶಿಷ್ಯವೇತನ ರೂಪದಲ್ಲಿ ನೀಡುತ್ತಾ ಬರಲಾಗುತ್ತಿದೆ. ಕಳೆದ ಶೈಕ್ಷಣಿಕ ವರ್ಷದಿಂದ (2025-26) ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಬಿ.ಜೆ.ಬಸವರಾಜು ಅವರು ತಮ್ಮ ಧರ್ಮಪತ್ನಿ ದಿ.ಮಂಜುಳಾ ಅವರ ಹೆಸರಿನಲ್ಲಿ ಪ್ರತಿ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ತಲಾ ಒಬ್ಬ ವಿದ್ಯಾರ್ಥಿಗೆ 5000 ರೂ.ನಂತೆ ಒಟ್ಟು 25,000 ರೂ.ಗಳನ್ನು ಸಹಾಯಧನದ ರೂಪದಲ್ಲಿ ಪ್ರತಿವರ್ಷ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಕಾಲೇಜಿನಲ್ಲಿ ಉತ್ತಮ ವಾತಾವರಣವಿದ್ದು ಎಲ್ಲ ವಿಷಯಗಳಲ್ಲಿ ಬೋಧನೆ ಮಾಡುವ ಪ್ರತಿಭಾವಂತ ಪ್ರಾಧ್ಯಾಪಕರನ್ನು ಈ ಕಾಲೇಜು ಒಳಗೊಂಡಿದೆ. ಈ ವರ್ಷದ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು ಆಸಕ್ತ ಅರ್ಹ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net