ಮುಂದಿನ ವರ್ಷದಿಂದ ವಿವಿಧ ಕಾರ್ಯಕ್ರಮ ಆಯೋಜನೆ

ನಗರದ ಗುರುಭವನದಲ್ಲಿ ಭಾವಗೀತೆ ಸ್ಪರ್ಧೆಗೆ ಶಾಸಕ ದರ್ಶನ್ ಚಾಲನೆ ನೀಡಿದರು. ಕಳಲೆ ಕೇಶವಮೂರ್ತಿ, ಸಿ.ಎಂ.ಶಂಕರ್,  ಲತಾ ಮುದ್ದುಮೋಹನ್, ನಾಗೇಶ್ ರಾಜ್, ಕುರಹಟ್ಟಿ ಮಹೇಶ್, ಶ್ರೀಕಂಠಸ್ವಾಮಿ, ಇತರರಿದ್ದ
ನಗರದ ಗುರುಭವನದಲ್ಲಿ ಭಾವಗೀತೆ ಸ್ಪರ್ಧೆಗೆ ಶಾಸಕ ದರ್ಶನ್ ಚಾಲನೆ ನೀಡಿದರು. ಕಳಲೆ ಕೇಶವಮೂರ್ತಿ, ಸಿ.ಎಂ.ಶಂಕರ್, ಲತಾ ಮುದ್ದುಮೋಹನ್, ನಾಗೇಶ್ ರಾಜ್, ಕುರಹಟ್ಟಿ ಮಹೇಶ್, ಶ್ರೀಕಂಠಸ್ವಾಮಿ, ಇತರರಿದ್ದ
Published on

ಪ್ರಮುಖ ಮುಖ್ಯಾಂಶಗಳು

  • ಮುಂದಿನ ವರ್ಷದಿಂದ ವಿವಿಧ ಕಾರ್ಯಕ್ರಮ
  • ಗರಳಪುರಿ ಉತ್ಸವವನ್ನು ಅದ್ದೂರಿ
ನಂಜನಗೂಡು: ಮುಂದಿನ ವರ್ಷದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗರಳಪುರಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.
ಗರಳಪುರಿ ಉತ್ಸವ ಅಂಗವಾಗಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಗುರುಭವನದಲ್ಲಿ ಆಯೋಜಿಸಿದ್ದ ಭಾವಗೀತೆ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ಸವದಲ್ಲಿ ತಾಲೂಕಿನ ಕಲಾವಿದರಿಗೆ ವೇದಿಕೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಗೌತಮ ಪಂಚ ಮಹಾ ರಥೋತ್ಸವದ ಹಿನ್ನೆಲೆಯಲ್ಲಿ ಉತ್ಸವ ಮಾಡಬೇಕೆಂಬ ಉದ್ದೇಶದಿಂದ ಎಲ್ಲ ಜನರನ್ನು ಒಗ್ಗೂಡಿಸಿ ಒಳ್ಳೆಯ ಕಾರ್ಯಕ್ರಮ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ನಮಗೆ ಅವಕಾಶ ಸಿಕ್ಕಾಗ ನಾವು ಅವಕಾಶವನ್ನು ಕೊಡಬೇಕು. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನಾವು ಸದಾ ನಿಮ್ಮೊಂದಿಗೆ ಇರುತ್ತೇವೆ. ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ಮಾಡುತ್ತೇವೆ. ಉತ್ಸವದ ಭಾಗವಾಗಿ ಭಾವಗೀತೆ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ಮಾ.21 ರಿಂದ 29ವರೆಗೆ ಉತ್ಸವ ಅದ್ದೂರಿಯಾಗಿ ನಡೆಯಲಿದ್ದು, ಪ್ರತಿ ದಿನ ವಿವಿಧ ಸ್ಪರ್ಧೆ ನಡೆಯಲಿದೆ. ಚದುರಂಗ, ಯೋಗ, ಚಿತ್ರಕಲೆ ಸ್ಪರ್ಧೆ, ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಭಾವಗೀತೆ ಸ್ಪರ್ಧೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಸ್ಥಳೀಯ ಗಾಯಕರು ಸ್ಪರ್ಧೆಯಲ್ಲಿದ್ದರು. ಇದರಲ್ಲಿ ಹೆಚ್ಚಾಗಿ ಮಹಿಳೆಯರೇ ಭಾಗವಹಿಸಿದ್ದು ವಿಶೇಷವಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲ ಗಾಯಕರಿಗೂ ಪ್ರಶಸ್ತಿ ಪತ್ರ ನೀಡಲಾಯಿತು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ಲತಾ ಮುದ್ದುಮೋಹನ್, ಕವಯತ್ರಿ ಶೋಭಾ ನಾಗಶಯನ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರಸಭಾ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net