ವರುಣ ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ

ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನ
Published on

ಪ್ರಮುಖ ಮುಖ್ಯಾಂಶಗಳು

  • ನಿದ್ರೆ ಮಾತ್ರೆ ಸೇವಿಸಿ ಪ್ರಜ್ಞಾಹೀನರಾಗಿ ಕುಸಿದು ಬಿದ್ಧ ಮಹಿಳಾ ಅಧಿಕಾರಿ
  • ವರ್ಗಾವಣೆ ಭೀತಿಯಿಂದ ಆತ್ಮಹತ್ಯೆಗೆ ಯತ್ನ..?
  • ವರುಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್
ಮೈಸೂರು: ವರುಣ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ದಿವ್ಯಾ ಅವರು ಕಚೇರಿಯಲ್ಲೇ ಆತ್ಮಹತ್ಯೆ ಯತ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಳಿಕ ನಿದ್ರೆ ಮಾತ್ರೆ ಸೇವಿಸಿ ಪ್ರಜ್ಞಾಹೀನರಾಗಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಕಚೇರಿಯ ಸಿಬ್ಬಂದಿ, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ವರ್ಗಾವಣೆ ಭೀತಿಯಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂಬ ಮಾಹಿತಿ ತಿಳಿದಿದೆ. ಅಸ್ವಸ್ಥಗೊಂಡಿರುವ ಮಹಿಳಾ ಅಧಿಕಾರಿಯ ಹೇಳಿಕೆಯ ನಂತರ ಈ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ವರುಣ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net