ನೇರಳಕುಪ್ಪೆ ಶಾಲೆಯಲ್ಲಿ ವಿವೇಕಾನಂದರ ಸ್ಮರಣೆ

ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಗಂಗರಾಜು, ಪ್ರಕಾಶ್, ರೂಪಾ, ವಿದ್ಯಾರ್ಥಿಗಳು ಸೇರಿ ಇತರರು ಇದ್ದರು.
ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಗಂಗರಾಜು, ಪ್ರಕಾಶ್, ರೂಪಾ, ವಿದ್ಯಾರ್ಥಿಗಳು ಸೇರಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Swami Vivekananda
ಹನಗೋಡು: ಹೋಬಳಿಯ ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಗಂಗರಾಜು ಮಾತನಾಡಿ, ವಿವೇಕಾನಂದರು ವಿವೇಕಾನಂದರ ತತ್ವಾದರ್ಶಗಳು ಭಾರತೀಯ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಅವರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿವಸ್ ಎಂದು ಆಚರಿಸಲು ನಿರ್ಧರಿಸಿದೆ. ಅವರು ಚಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣ ನಮ್ಮ ನೆಲದ ಸತ್ವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿತು. ಅವರ ಏಳಿ, ಎದ್ದೇಳಿ ಗುರಿ ಮುಟ್ಟುವವರೆಗೂ ನಿಲ್ಲದಿರಿ ಎಂಬ ಕರೆ ಇಂದಿಗೂ ಯುವ ಸಮೂಹವನ್ನು ಮುನ್ನಡೆಸುತ್ತಿದೆ. ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ಭಾವೈಕ್ಯತೆ, ಹೊಸ ಚೈತನ್ಯ ಮೂಡುತ್ತದೆ ಎಂದರು. ಶಿಕ್ಷಕರಾದ ಸಿ.ಎ. ಪ್ರಕಾಶ್, ರೂಪಾ, ಲಿಖಿನ್, ಯೋಗೇಶ್, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net