ಎಸ್‌ಐಆರ್ ಪ್ರಕ್ರಿಯೆ ಪರಿಶೀಲಿಸಿದ ಮತದಾರರ ಪಟ್ಟಿ ವೀಕ್ಷಕ

ವಿಶೇಷ ಸಮಗ್ರ ಪರಿಷ್ಕರಣೆ
ವಿಶೇಷ ಸಮಗ್ರ ಪರಿಷ್ಕರಣೆ
Published on
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಈ ಸಂಬಂಧ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಬುಧವಾರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಎನ್ಯುಮರೇಶನ್ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿಗಳಿಂದ ಮಾಹಿತಿ ಪಡೆದರು.
ಯಾವುದೇ ಅರ್ಹ ಮತದಾರ ಪಟ್ಟಿಯಿಂದ ಬಿಟ್ಟು ಹೋಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 6 ಗೋಕುಲಂಗೆ ಭೇಟಿ ನೀಡಿ ಗಣಿಕೆ ನಮೂನೆಗಳನ್ನು ವಿತರಣೆ ಮಾಡುತ್ತಿರುವ ಕಾರ್ಯದ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net