ಲಾರಿ ಚಾಲಕ ಬೆಳಗಾವಿ ಜಿಲ್ಲೆಯ ಪತ್ರೇಪ್ಪ ಯಲ್ಲಪ್ಪ ವತ್ರ (30) ಮೇಲೆ ಏಳು ಜನ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ನಡೆಸಿ, ಅಕೌಂಟ್‌ನಲ್ಲಿ ಇದ್ದ ಆರು ಸಾವಿರ ರೂ.ಗಳನ್ನು ಬಲವಂತವಾಗಿ ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳು ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.