ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.