ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ

ಮೈಸೂರಿನ ಓವೆಲ್ ಮೈದಾನದಲ್ಲಿ ಆಯೋಜಿಸಿದ್ದ ತೋಟಗಾರಿಕೆ ಮಹಾವಿದ್ಯಾಲಯಗಳ ಗೇಮ್ಸ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು. ಪ್ರೊ.ಎನ್.ಕೆ.ಲೋಕನಾಥ್, ಡಾ.ಎಂ.ಬಿ. ಬೋರಲಿಂಗಯ್ಯ, ಡಾ.ಸಿ ವೆಂಕಟೇಶ್, ಚೈತ್ರಾ, ವಿ.ಸುನೀಲ್ ಇತರರಿದ್ದರು.
ಮೈಸೂರಿನ ಓವೆಲ್ ಮೈದಾನದಲ್ಲಿ ಆಯೋಜಿಸಿದ್ದ ತೋಟಗಾರಿಕೆ ಮಹಾವಿದ್ಯಾಲಯಗಳ ಗೇಮ್ಸ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು. ಪ್ರೊ.ಎನ್.ಕೆ.ಲೋಕನಾಥ್, ಡಾ.ಎಂ.ಬಿ. ಬೋರಲಿಂಗಯ್ಯ, ಡಾ.ಸಿ ವೆಂಕಟೇಶ್, ಚೈತ್ರಾ, ವಿ.ಸುನೀಲ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಭಿಮತ
  • ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮ
ಮೈಸೂರು: ಉತ್ತಮ ಆರೋಗ್ಯ, ಚಿಂತನೆ ಹಾಗೂ ಉತ್ತಮ ಮಾರ್ಗದರ್ಶಕರಾಗಲು ಕ್ರೀಡೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಶಕ್ತಿಯುತರಾಗಿ ಆರೋಗ್ಯವಂತರಾಗಿರಬಹುದು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು.
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮೈಸೂರು ವತಿಯಿಂದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ 16ನೇ ತೋಟಗಾರಿಕೆ ಮಹಾವಿದ್ಯಾಲಯಗಳ ಗೇಮ್ಸ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ತೋಟಗಾರಿಗೆ ಶಿಕ್ಷಣ ತೋಟಗಾರಿಕೆಗೆ ಸೀಮಿತವಾಗದೇ ಬಹುಮುಖ ಅಧ್ಯಯನ ಮಾಡಬೇಕು ಎಂಬುದು ನನ್ನ ಆಶಯವಾಗಿದೆ. ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ, ಆದರೆ ಭಾಗವಹಿಸುವಿಕೆ ಎಂಬುದು ಬಹಳ ಮುಖ್ಯ ಆದ್ದರಿಂದ ಕ್ರೀಡೆಯಲ್ಲಿ ಸೋಲು ಗೆಲುವುವನ್ನು ಸಮಾಂತರವಾಗಿ ತೆಗೆದುಕೊಳ್ಳುವ ಸ್ಫೂರ್ತಿ ವಿದ್ಯಾರ್ಥಿಗಳಲ್ಲಿ ಬರಬೇಕು ಎಂದು ತಿಳಿಸಿದರು.
ಕ್ರೀಡೆ ಎಂದರೆ ಎಲ್ಲರೂ ಒಟ್ಟಿಗೆ ಸೇರಿ ಆಟ ಆಡುವುದಾಗಿದೆ. ಎಲ್ಲರೂ ಒಟ್ಟಿಗೆ ಸೇರುವುದೇ ಒಂದು ನಿಜವಾದ ಗೆಲುವು. ಆದ್ದರಿಂದ ಎಲ್ಲರೂ ಒಟ್ಟಿಗೆ ಸೇರಿ ಸಂತೋಷದಿಂದ ಒಗ್ಗಟಿನಿಂದ ಕೂಡಿ ಈ ನಾಲ್ಕು ದಿನಗಳ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕ್ರೀಡೆಯನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.
ದಕ್ಷಿಣ ವಲಯದ ಉಪ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಬಿ. ಬೋರಲಿಂಗಯ್ಯ ಮಾತನಾಡಿ, ಕ್ರೀಡೆ ಎಂಬುದು ಪ್ರತಿಯೊಬ್ಬರಿಗೂ ಬಹಳ ಅತ್ಯವಶ್ಯಕವಾಗಿದೆ. ಕ್ರೀಡೆಯಲ್ಲಿ ಏಳು-ಬೀಳು, ಸೋಲು-ಗೆಲುವನ್ನು ಕ್ರೀಡೆಯಲ್ಲಿ ಸಮನಾಗಿ ಸ್ವೀಕರಿಸಬೇಕು. ಜನರ ಆರೋಗ್ಯ ಸಮಸ್ಯೆಯನ್ನು ನಿವಾರಿಸಲು ಕ್ರೀಡೆಯು ಸಹಕಾರಿಯಾಗಿದೆ. ಪ್ರತಿಯೊಬ್ಬರು ಜೀವನದಲ್ಲಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು. ಕ್ರೀಡೆ ಕಡೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಕ್ರೀಡೆ ದೈಹಿಕ ಸಾಮರ್ಥ್ಯಕ್ಕೆ ಒಂದು ಸಾಧನವಾಗಿದೆ. ಆದ್ದರಿಂದ ಎಲ್ಲರೂ ಸಹ ದೈಹಿಕ ಸಾಮರ್ಥ್ಯದ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ ವೆಂಕಟೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಲು ಹಾಗೂ ಭಾವನೆಗಳ ಸಮತೋಲನಕ್ಕೆ ಕ್ರೀಡೆ ಎಂಬುದು ಅತ್ಯವಶ್ಯಕವಾಗಿದೆ. ಸತತ ಪ್ರಯತ್ನವೇ ಯಶಸ್ಸಿಗೆ ಮೂಲ ಕಾರಣ ಎಂಬುವ ರೀತಿ ಕ್ರೀಡೆಯಲ್ಲಿ ನಾವು ಹೆಚ್ಚು ಶ್ರಮಪಟ್ಟರೆ ಯಶಸ್ಸು ಕಂಡಿದ ನಮ್ಮದಾಗುತ್ತದೆ ಎಂದು ಹೇಳಿದರು.
ಡಿ.14ರವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಖೋ- ಖೋ ಆಟಗಾರ್ತಿ ಚೈತ್ರಾ ಚಾಲನೆ ನೀಡಿದರು. ಡೀನ್ ಡಾ.ಸಿ.ಎನ್.ಹಂಚಿನಮನಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ವಿ.ಸುನೀಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ, ಬಾಗಲಕೋಟೆ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಡಾ.ಎಸ್.ಎನ್.ವಾಸುದೇವನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net