ಕಾಡು ಪ್ರಾಣಿಗಳಿಲ್ಲದಿದ್ದರೆ ಪರಿಸರ ಸ್ಮಶಾನ

ಹುಣಸೂರು ತಾಲೂಕು ತೊಂಡಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ  ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿ ನೆಡಲಾಯಿತು. ಮುಖ್ಯಶಿಕ್ಷಕ ಶ್ರೀನಿವಾಸ್, ಸಂಪನ್ಮೂಲ ವ್ಯಕ್ತಿ ವಸಂತಕುಮಾರ್, ಅಶೋಕ್, ವೆಂಕಟೇಶ್, ಕಾವ್ಯಾ ಇತರರಿದ್ದರು.
ಹುಣಸೂರು ತಾಲೂಕು ತೊಂಡಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿ ನೆಡಲಾಯಿತು. ಮುಖ್ಯಶಿಕ್ಷಕ ಶ್ರೀನಿವಾಸ್, ಸಂಪನ್ಮೂಲ ವ್ಯಕ್ತಿ ವಸಂತಕುಮಾರ್, ಅಶೋಕ್, ವೆಂಕಟೇಶ್, ಕಾವ್ಯಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಳ್ಳೂರು ಕ್ಲಸ್ಟರ್ ಸಂಪನ್ಮೂಲವ್ಯಕ್ತಿ ವಸಂತಕುಮಾರ್ ಅಭಿಪ್ರಾಯ
ಹುಣಸೂರು: ಕಾಡುಗಳಿಲ್ಲದ, ಕಾಡು ಪ್ರಾಣಿಗಳಿಲ್ಲದ ಪರಿಸರವು ಸ್ಮಶಾನಕ್ಕಿಂತ ಭೀಕರವಾಗಿರುತ್ತದೆ ಎಂದು ಮುಳ್ಳೂರು ಕ್ಲಸ್ಟರ್ ಸಂಪನ್ಮೂಲವ್ಯಕ್ತಿ ಎಸ್.ವಸಂತಕುಮಾರ್ ಅಭಿಪ್ರಾಯಪಟ್ಟರು.
ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಕ್ಲಸ್ಟರ್‌ನ ತೊಂಡಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮುಂಬರುವ ಪೀಳಿಗೆಯು ಸುಂದರವಾದ ಜೀವನವನ್ನು ಹೊಂದಲು ಆರೋಗ್ಯಕರ, ಸಂತೋಷಕರ ವಾತಾವರಣಕ್ಕಾಗಿ ಗಿಡಮರಗಳನ್ನು ಬೆಳೆಸಬೇಕಿದೆ. ಪ್ರಸ್ತುತ ಮಾನವನಿಂದ ಅರಣ್ಯಗಳು ಹಾಳಾಗುತ್ತಿದ್ದು, ಅವುಗಳ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ನೆಡೆಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಅಶೋಕ, ಸದಸ್ಯರಾದ ವೆಂಕಟೇಶ, ಕಾವ್ಯಾ, ದಿವ್ಯಾ, ಮುಖ್ಯ ಶಿಕ್ಷಕ ಶ್ರೀನಿವಾಸ, ಸಹಶಿಕ್ಷಕ ದೇವರಾಜು, ದೀಪಾ, ಅಂಗನವಾಡಿ ಶಿಕ್ಷಕಿ ಸವಿತ, ವಿದ್ಯಾರ್ಥಿಗಳು,ಪಾಲಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net