ನಂಬಿಕೆ ಗಿಟ್ಟಿಸಿದ್ದ ಈತ ಹಣವನ್ನು ತನ್ನ ಖಾತೆಗೆ ವರ್ಗಾವಣೆ
ಮೈಸೂರು: ಮ್ಯಾಟ್ರಿಮೋನಿಯಲ್ಲಿ ಪರಿಚಿತ ವ್ಯಕ್ತಿಯು ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11.76 ಲಕ್ಷ ರೂ. ವಂಚನೆ ಮಾಡಿದ್ದಾನೆ.
ಖಾಸಗಿ ಶಾಲೆಯ ಶಿಕ್ಷಕಿ ಹಣ ಕಳೆದುಕೊಂಡವರು. ಸಚಿನ್ ಎಂಬಾತನೇ ಹಣ ಪಡೆದು ಮೋಸ ಮಾಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಈತ, ತಾನು ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಿಮ್ಮನ್ನು ವಿವಾಹ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾನೆ.
ನಂತರ ನಿಮ್ಮನ್ನು ಭೇಟಿಯಾಗಲು ಭಾರತಕ್ಕೆ ಬರುತ್ತೇನೆ ಎಂದೂ ಭರವಸೆ ನೀಡಿ, ನಂಬಿಕೆ ಗಿಟ್ಟಿಸಿದ್ದ ಈತ ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಈಗ ಹಣ ವಾಪಸ್ ನೀಡದೇ ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.