ಮಗುವಿನೊಂದಿಗೆ ಬೈಕ್‌ನಲ್ಲಿ ಪಿರಿಯಾಪಟ್ಟಣಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಜೆ.ಸಿ.ಬಿ.ವಾಹನದ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ನಡೆದಿದೆ. ಸ್ಥಳೀಯರ ಸಹಾಯದಿಂದ ಅಂಜಲಿ ಅವರನ್ನು ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಗರ್ ಅವರಿಗೂ ತಲೆಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.