ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಅಪರಾಧ
ಅಪರಾಧ
Published on
ಮೈಸೂರು: ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಸುಮಾರು 55ರಿಂದ 60 ವರ್ಷ ವಯಸ್ಸಿನ ಮಹಿಳೆ ಫೆ.3ರಂದು ಬೆಳಗ್ಗೆ ಸುಮಾರು 6 ಗಂಟೆಗೆ ಮೈಸೂರು ನಗರದ ವಿವಿ ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಹೂಟಗಳ್ಳಿ ಸಿಗ್ನಲ್ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಫೆ.9ರಂದು ಮೃತಪಟ್ಟಿದ್ದಾರೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಬೈಕ್ (ಕೆಎ-02, ಇಕ್ಯೂ-7884) ಸವಾರ ಆನಂದ್ ಎಂಬಾತನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ. ವಿವಿ ಪುರಂ ಸಂಚಾರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತರ ವಾರಸುದಾರರು ಇದ್ದಲ್ಲಿ ವಿವಿ ಪುರಂ ಸಂಚಾರ ಪೊಲೀಸ್ ಠಾಣೆ ಸಂಪರ್ಕಿಸಲು ಕೋರಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net