ಪ್ರಮುಖ ಮುಖ್ಯಾಂಶಗಳು.40 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಹಿಂದಿನಿಂದ ಬಂದ ದುಷ್ಕರ್ಮಿ ಕತ್ತಿನಲ್ಲಿದ್ದ ಸರವನ್ನು ಕಿತ್ತುಕೊಂಡು ಪರಾರಿ.ಮೈಸೂರು: ಅಶೋಕಪುರಂ ರೈಲ್ವೆ ನಿಲ್ದಾಣ ಬಳಿ ಮಂಗಳವಾರ ರಾತ್ರಿ ಖದೀಮನೊಬ್ಬ ಮಹಿಳೆಯ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.. ಚಿಕ್ಕಹರದನಹಳ್ಳಿಯ ರಶ್ಮಿ ಎಂಬುವರೇ 40 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡವರು. .ಇವರು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ಕೆಟ್ಟು ನಿಂತಿದೆ. ಆಗ ಗಾಡಿಯನ್ನು ಪರಿಶೀಲಿಸುತ್ತಿದ್ದರು. .ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ದುಷ್ಕರ್ಮಿ ಕತ್ತಿನಲ್ಲಿದ್ದ ಸರವನ್ನು ಕಿತ್ತುಕೊಂಡು ಹೋಗಿದ್ದಾನೆ. ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.