ಖಾಲಿ ಕೊಡ ಹಿಡಿದು ಮಹಿಳೆಯರ ಪ್ರತಿಭಟನೆ

ಬೈಲುಕುಪ್ಪೆ ಮರಡಿಯೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಮಹಿಳೆಯರು ಖಾಲಿ ಕೊಡ ಹಿಡಿದು ಭಾನುವಾರ ಪ್ರತಿಭಟನೆ ನಡೆಸಿದರು.
ಬೈಲುಕುಪ್ಪೆ ಮರಡಿಯೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಮಹಿಳೆಯರು ಖಾಲಿ ಕೊಡ ಹಿಡಿದು ಭಾನುವಾರ ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • Women protest
ಬೈಲುಕುಪ್ಪೆ: ಮರಡಿಯೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಮಹಿಳೆಯರು ಖಾಲಿ ಕೊಡ ಹಿಡಿದು ಭಾನುವಾರ ಪ್ರತಿಭಟನೆ ನಡೆಸಿದರು.
ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಡಿಯೂರು ಗ್ರಾಮದ ಮಹಿಳೆಯರು ಖಾಲಿ ಕೊಡ ಹಿಡಿದು ಅಧಿಕಾರಿಗಳ ನಿರ್ಲಕ್ಷೃಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಮಹಿಳೆ ಭಾಗ್ಯಮ್ಮ ಮಾತನಾಡಿ, ನಮ್ಮ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪೈಪ್‌ಲೈನ್ ಮಾಡಲಾಗಿದೆ. ಆದರೆ ಕಳಪೆ ಕಾಮಗಾರಿಯಿಂದಾಗಿ ಒಂದನೇ ಮತ್ತು ಎರಡನೇ ಬೀದಿಗೆ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ಕುಡಿಯಲು ಮತ್ತು ದಿನ ಬಳಕೆಗೆ ನೀರಿನ ಕೊರತೆಯುಂಟಾಗಿದೆ. ನೀರಿಲ್ಲದೆ ಮಕ್ಕಳನ್ನು ಶಾಲೆಗೆ ಸಮಯಕ್ಕೆ ಸರಿಯಾಗಿ ಕಳಿಸಲು ಸಾಧ್ಯವಾಗುತ್ತಿಲ್ಲ. ಮನೆ ಕೆಲಸಗಳೂ ಸರಿಯಾಗಿ ಆಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ರಾಜಮಣಿ ಮಾತನಾಡಿ, ನೀರುಗಂಟಿಯನ್ನು ಸರಿಯಾಗಿ ನೀರು ಬಿಡು ಎಂದು ಕೇಳಿದರೆ, ನಾನು ಏನು ಮಾಡಲಿ ಬೋರ್ ವೆಲ್‌ನಲ್ಲಿ ನೀರಿಲ್ಲ. ಜಲಜೀವನ ಮಿಷನ್ ವಾಲ್ವ್‌ಗಳು ಸರಿಯಾಗಿಲ್ಲ. ಈ ಬಗ್ಗೆ ಪಂಚಾಯಿತಿ ಗಮನಕ್ಕೆ ತಂದಿದ್ದೇನೆ ಎಂದು ಹೇಳುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಪಳನಿಯಮ್ಮ, ಲಕ್ಷ್ಮಮ್ಮ, ಶಾಂತಮ್ಮ, ರುಬಿ, ಮಂಜುಳಾ, ಪ್ರಿಯಾ, ರತ್ನಮ್ಮ, ಭಾಗ್ಯಮ್ಮ, ಶಾಂತಮ್ಮ, ಪುಷ್ಪ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net