ಪೂಜೆಗಿದೆ ಸಮಾಜ ಸಂಘಟಿಸುವ ಶಕ್ತಿ

ಹನಗೋಡಿನಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ರೇಣುಕಪ್ರಸಾದ್, ಮಹೇಶ್, ಮಮತರಾವ್, ನಾರಾಯಣಶೆಟ್ಟಿ ಇದ್ದರು.
ಹನಗೋಡಿನಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ರೇಣುಕಪ್ರಸಾದ್, ಮಹೇಶ್, ಮಮತರಾವ್, ನಾರಾಯಣಶೆಟ್ಟಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಡಾ ಕೆ.ಎಸ್.ರೇಣುಕಾ ಪ್ರಸಾದ್
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ
ಹನಗೋಡು: ಪೂಜಾ ಕಾರ್ಯಗಳು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ. ಬದಲಾಗಿ ಅದು ಎಲ್ಲರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಮಾಜವನ್ನು ಸಂಘಟಿಸುವ ಶಕ್ತಿಯುತ ಸಂಕೇತವಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಡಾ ಕೆ.ಎಸ್.ರೇಣುಕಾ ಪ್ರಸಾದ್ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಗುರುವಾರ ಗ್ರಾಮದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಮಾತನಾಡಿದರು. ಪೂಜೆ ಮೂಲಕ ಒಡೆದ ಮನಸ್ಸುಗಳನ್ನು ಒಂದಾಗಿಸಬಹುದು. ಮನುಷ್ಯನ ರೂಪದಲ್ಲಿಯೇ ದೇವರು ಇದ್ದು, ಭಕ್ತಿಯ ಮೂಲಕ ಕುಟುಂಬಗಳನ್ನು ಸಂಘಟಿಸಿ ಒಂದು ಗ್ರಾಮವನ್ನು ಕುಟುಂಬವನ್ನಾಗಿಸುವುದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಆಶಯವಾಗಿದೆ ಎಂದರು.
ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ದಾ.ರಾ.ಮಹೇಶ್ ಮಾತನಾಡಿ, 20 ವರ್ಷಗಳಿಂದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಬಡವರಿಗೆ ವಸತಿ, ವ್ಯಸನ ನಿರ್ಮೂಲನೆ ಹಾಗೂ ಆರ್ಥಿಕ ಸಬಲೀಕರಣ ಮೂಲಕ ನೈಜ ಗ್ರಾಮೀಣಾಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.
ಯೋಜನೆಯ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ಪೂಜಾ ಸಮಿತಿಯ ಅಧ್ಯಕ್ಷೆ ಎಚ್.ಎಸ್.ಭಾಮಮಣಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಯೋಜನಾಧಿಕಾರಿ ನಾರಾಯಣಶೆಟ್ಟಿ, ಮೇಲ್ವಿಚಾರಕಿ ಸುನಂದಾ ಇತರರಿದ್ದರು. ಯೋಜನೆಯ ಸ್ವಸಹಾಯ ಸಂಘಗಳ 500ಕ್ಕೂ ಹೆಚ್ಚು ಮಹಿಳೆಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net