ಕಲ್ಲಹಳ್ಳಿಯ ಸಮಾಧಿಗೆ ಪುಷ್ಪಾರ್ಚನೆ

 ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿಯಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ದಿವಂಗತ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅರಸು ಅವರ ಸಮಾಧಿಗೆ ಪುಷ್ಪಾರ್ಚನೆ ಸಲ್ಲಿಸಿದ ಅಧಿಕಾರಿಗಳು. ಜೆ. ಮಂಜುನಾಥ್,  ಕೆ.ಹೊಂಗಯ್ಯ, ಆರತಿ, ಮಂಜುಳಾ ಇತರರು ಇದ್ದರು.
ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿಯಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ದಿವಂಗತ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅರಸು ಅವರ ಸಮಾಧಿಗೆ ಪುಷ್ಪಾರ್ಚನೆ ಸಲ್ಲಿಸಿದ ಅಧಿಕಾರಿಗಳು. ಜೆ. ಮಂಜುನಾಥ್, ಕೆ.ಹೊಂಗಯ್ಯ, ಆರತಿ, ಮಂಜುಳಾ ಇತರರು ಇದ್ದರು.
Published on

ಹನಗೋಡು: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಕ್ಕೆ ಆದ್ಯತೆ ನೀಡುವುದರ ಜತೆಗೆ ಭೂರಹಿತರಿಗೆ ಭೂಮಿ ಕಲ್ಪಿಸಿ, ಶೋಷಿತ ಹಾಗೂ ಹಿಂದುಳಿದ ವರ್ಗಗಳಿಗೆ ರಾಜಕೀಯ ಅಧಿಕಾರ ದೊರಕಿಸಿಕೊಟ್ಟ ಮಹಾನ್ ನಾಯಕ ಎಂದು ತಹಸೀಲ್ದಾರ್ ಜೆ. ಮಂಜುನಾಥ್ ಹೇಳಿದರು.

ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಪ್ರಯುಕ್ತ ಅರಸು ಅವರ ಸಮಾಧಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ದೇವರಾಜ ಅರಸು ಅವರು ಭೂ ಸುಧಾರಣಾ ಕಾಯ್ದೆ ಜಾರಿಗೊಳಿಸಿ, ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಯೋಜನೆ ಮೂಲಕ ಭೂರಹಿತ ರೈತರಿಗೆ ಭೂಮಿ ದೊರಕಿಸಿಕೊಟ್ಟರು. ಹಾವನೂರು ಆಯೋಗ ರಚಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಅವರನ್ನು ಮೇಲೆತ್ತಲು ಶ್ರಮಿಸಿದರು ಎಂದು ಸ್ಮರಿಸಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಿ, ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅವರ ದೂರದೃಷ್ಟಿಯ ಫಲವಾಗಿ ಅನೇಕ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಂದು ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಇಒ ಕೆ.ಹೊಂಗಯ್ಯ, ಬಿಸಿಎಂ ಅಧಿಕಾರಿ ಆರತಿ, ಪಿಡಿಒ ಮಂಜುಳಾ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹರ್ಷಿಣಿ ಸುಷ್ಮಾ, ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ, ಹಿರಿಯ ಮುಖಂಡರಾದ ಕಣಗಾಲು ರಾಮೇಗೌಡ, ಬಿಳಿಕೆರೆ ರಾಜು, ಗ್ರಾಮದ ಯುವ ಮುಖಂಡ ಕೌಶಿಕ್, ಕಣಗಾಲು ಮಲ್ಲೇಶ್, ಅಜಿತ್, ರಾಜೇಶ್ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net