ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ

ಸರಗೂರು ತಾಲೂಕಿನ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು
ಸರಗೂರು ತಾಲೂಕಿನ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು
Published on
ಸರಗೂರು.: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ “ಯೋಗ” ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ಲಯನ್ಸ್ ಅಕಾಡೆಮಿ ಶಾಲೆಯ ಪ್ರಾಂಶುಪಾಲ ದಾಸಚಾರಿ ಹೇಳಿದರು.
ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆ ಭಾನುವಾರ
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾನುವಾರ ದಂದು ಆಚರಿ ಮಾತನಾಡಿದರು.
ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಭಾಗ್ಯ ರಕ್ಷಣೆಗೆ ಯೋಗ ಸಹಕಾರಿಯಾಗಿದೆ. ಆಧುನಿಕ ಜೀವನಶೈಲಿ, ಆಹಾರ-ವಿಹಾರ ವಿಧಾನದಿಂದಾಗಿ ನಾವು ಅನೇಕ ಒತ್ತಡಗಳಿಗೆ ಒಳಗಾಗುತ್ತಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನಕ್ಕೆ ಯೋಗ ಸಹಕಾರಿಯಾಗಲಿದೆ .
ಲಯನ್ಸ್ ಅಕಾಡಮಿ ಶಾಲೆ ಮುಖ್ಯ ಶಿಕ್ಷಕಿ ಪದ್ಮಶ್ರೀ ಮಾತನಾಡಿ ಯೋಗ ದಿಂದ ದೇಹ ಮನಸ್ಸು ಮತ್ತು ಆರೋಗ್ಯ ಸುಸ್ಥಿರವಾಗಲು ಕಾರಣವಾಗಿದೆ. ಯೋಗವು ಎಲ್ಲಾ ರೋಗಗಳಿಗೆ ರಾಮಬಾಣವಾಗಿದ್ದು ಪ್ರತಿದಿನ ವಿದ್ಯಾರ್ಥಿಗಳು ಕನಿಷ್ಠ ಹಾಸನ ಗಳನ್ನಾದರೂ ರೂಢಿ ಮಾಡಿಕೊಳ್ಳಬೇಕು. ಸದೃಢ ಭಾರತಕ್ಕಾಗಿ ಯೋಗ ಮಾಡುವುದರೊಂದಿಗೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ಶಿಬಿರ ನಡೆಸಿ, ಆರೋಗ್ಯ ರಕ್ಷಣೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಲಯನ್ಸ್ ಅಕಾಡೆಮಿ ಶಾಲೆಯ ಸಹಶಿಕ್ಷಕ ಮತ್ತು ಮಕ್ಕಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net