8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋವಿಂದಯ್ಯ ಮಾತನಾಡಿ, ಯೋಗಾಭ್ಯಾಸ ನಿತ್ಯಜೀವನದ ಭಾಗವಾಗಬೇಕಿದೆ. ಪಾಶ್ಚಿಮಾತ್ಯ ದೇಶಗಳು ಭಾರತೀಯ ಸಂಸ್ಕೃತಿಯಲ್ಲಿ ಸಮ್ಮಿಳಿತವಾಗಿರುವ ಯೋಗ, ಧ್ಯಾನಗಳ ಕುರಿತು ಹೆಚ್ಚಿನ ಆಸ್ಥೆ ವಹಿಸುತ್ತಿದ್ದಾರೆ. ಮನಸು ಮತ್ತು ದೇಹವನ್ನು ಸುಸ್ಥಿತಿಯಲ್ಲಿಡುವುದೇ ಯೋಗದ ಮೂಲ ಗುರಿಯಾಗಿದೆ. ಒತ್ತಡದ ಜೀವನವನ್ನು ಸರಳಗೊಳಿಸಿಕೊಳ್ಳಲು ಯೋಗವೊಂದೇ ಸಾಧನವಾಗಿದೆ ಎಂದು ಹೇಳಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಅನಿತಾ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಭಾಗ್ಯಮ್ಮ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಆಯಿಷಾ ಪಿ.ಮಜಿದ್, ಹೆಚ್ಚುವರಿ ಸಿವಿಲ್ ನ್ಯಾಯಧೀಶೆ ನಮ್ರತಾ ಎಸ್.ಹೊಸಮಠ ಇತರರು ಇದ್ದರು.