ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ

 ಕೆ.ಆರ್.ನಗರದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಜ್.
ಕೆ.ಆರ್.ನಗರದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಜ್.
Published on

ಪ್ರಮುಖ ಮುಖ್ಯಾಂಶಗಳು

  • Young man stabbed
ಕೆ.ಆರ್.ನಗರ: ಕ್ಷುಲಕ ಕಾರಣಕ್ಕೆ ಯುವಕನ ಮೇಲೆ ಒಂದು ಕೋಮಿನ ಯುವಕರ ತಂಡ ಹಲ್ಲೆ ನಡೆಸಿ, ಚಾಕು ಇರಿದು ಗಾಯಗೊಳಿಸಿರುವ ಘಟನೆ ಇತ್ತೀಚೆಗೆ ನಡೆದಿದೆ.
ಪಟ್ಟಣದ ಮಧುವನಹಳ್ಳಿ ಬಡಾವಣೆಯ ತುಳಿಸಿದಾಸ್ ಪುತ್ರ ಮನೋಜ್ ಅಲಿಯಾಸ್ ಮನು ಹಲ್ಲೆಗೊಳಗಾದವನು. ಮೇ 5ರಂದು ಕೆಲಸ ಮುಗಿಸಿಕೊಂಡು ಮಧುವನಹಳ್ಳಿ ರಸ್ತೆಯಲ್ಲಿರುವ ಬಾರ್‌ನಲ್ಲಿ ಮದ್ಯ ಖರೀದಿಸಿ ಬರುವಾಗ ಅಲ್ಲೇ ಗುಂಪುಗೂಡಿದ್ದ ಮುದಾಸೀರ್, ಸೈಯದ್ ಸಹಬಾಜ್, ತಾಜ್ ಹಾಗೂ ಮತ್ತಿತರರು ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಪ್ರಶ್ನಿಸಿದ ಮಮೋಜ್‌ಗೆ ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಿ ಮುದಾಸೀರ್ ಎಂಬುವವನು ಚಾಕು ಚುಚ್ಚಿದ್ದಾನೆ. ತಕ್ಷಣ ಸ್ಥಳದಲ್ಲಿ ಇದ್ದವರು ಮನೋಜ್ ನೆರವಿಗೆ ಬಂದಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡಿ ಕಳುಹಿಸಿದ್ದಾರೆ. ಸದ್ಯ ಮನೋಜ್‌ಗೆ ಕೆ.ಆರ್.ನಗರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ಮೇ 8ರಂದು ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ. ಹಾಗೂ ವಿಷಯ ತಿಳಿದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net