‘ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆ’ ಯುವ ಕಾಂಗ್ರೆಸ್‌ನಿಂದ ಜಾಗೃತಿ

ಕೆ.ಆರ್.ಕ್ಷೇತ್ರದ ಯುವ ಕಾಂಗ್ರೆಸ್‌ನಿಂದ ನಗರದಲ್ಲಿ ಬುಧವಾರ ಆಯೋಜಿಸಿದ್ದ ಜಾಗೃತಿ ಅಭಿಯಾನ ಸಹಿ ಸಂಗ್ರಹಕ್ಕೆ ಎಂ.ಕೆ.ಸೋಮಶೇಖರ್ ಚಾಲನೆ ನೀಡಿದರು. ಎಂ.ಲಕ್ಷ್ಮಣ್, ಡೇರಿ ವೆಂಕಟೇಶ್, ಎಂ.ಆರ್.ಹೊಯ್ಸಳ, ಜಿ.ಸೋಮಶೇಖರ್, ನಾಗೇಶ್ ಕರಿಯಪ್ಪ ಇತರರು ಇದ್ದರು.
ಕೆ.ಆರ್.ಕ್ಷೇತ್ರದ ಯುವ ಕಾಂಗ್ರೆಸ್‌ನಿಂದ ನಗರದಲ್ಲಿ ಬುಧವಾರ ಆಯೋಜಿಸಿದ್ದ ಜಾಗೃತಿ ಅಭಿಯಾನ ಸಹಿ ಸಂಗ್ರಹಕ್ಕೆ ಎಂ.ಕೆ.ಸೋಮಶೇಖರ್ ಚಾಲನೆ ನೀಡಿದರು. ಎಂ.ಲಕ್ಷ್ಮಣ್, ಡೇರಿ ವೆಂಕಟೇಶ್, ಎಂ.ಆರ್.ಹೊಯ್ಸಳ, ಜಿ.ಸೋಮಶೇಖರ್, ನಾಗೇಶ್ ಕರಿಯಪ್ಪ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಭಾವನಾತ್ಮಕವಾಗಿ ಬಿಜೆಪಿ ಜನರನ್ನು ಸೆಳೆಯುತ್ತಿದೆ
  • ಪಾರದರ್ಶಕ ಮತದಾನ, ಪ್ರಜಾಪ್ರಭುತ್ವದ ಮೌಲ್ಯ ಉಳಿಸಬೇಕು
ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಬುಧವಾರ ಮತದಾನ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆ ಹೆಸರಿಲ್ಲಿ ಜಾಗೃತಿ ಅಭಿಯಾನ ಆಯೋಜಿಸಲಾಗಿತ್ತು.
ಅಭಿಯಾನದ ಅಂಗವಾಗಿ ರಾಮಚಂದ್ರರಾವ್ (ಅಗ್ರಹಾರ ವೃತ್ತ)ದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಲಾಯಿತು. 
ಅಭಿಮಾನಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಇಡೀ ದೇಶದಲ್ಲಿ ಬಿಜೆಪಿ ಅಭಿವೃದ್ಧಿ ಅಜೆಂಡಾದಲ್ಲಿ ಚುನಾವಣೆ ಎದುರಿಸಿಲ್ಲ. ಬದಲಾಗಿ ಪ್ರತಿಯೊಂದು ಚುನಾವಣೆಯಲ್ಲೂ ಒಂದಲ್ಲ ಒಂದು ರೀತಿಯಲ್ಲಿ ತಂತ್ರಗಾರಿಕೆ ಅನುಸರಿಸಿ ದೇಶದ ಚುಕ್ಕಾಣಿ ಹಿಡಿಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. 
ಮತ ಕಳ್ಳತನ ನಿಲ್ಲಿಸಿ, ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಿಸಿ ಎಂದು ಕೇಂದ್ರ ಸರ್ಕಾರದ ಮತ್ತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸಹಿ ಸಂಗ್ರಹಣೆ ಅಭಿಯಾನ ನಡೆಯುತ್ತಿದೆ ಎಂದರು.
ದೇಶದ ಸೈನ್ಯದ ಹೆಸರಿನಲ್ಲಿ ಭಾವನಾತ್ಮಕ ವಿಷಯ ಬಳಸುವುದು, ಧರ್ಮ, ಜಾತಿ, ದೇವರ ಹೆಸರಿನಲ್ಲಿ ಜನರನ್ನು ಸೆಳೆಯುವುದು. ಮತ್ತೊಂದು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮನೆ, ಕಚೇರಿಗಳನ್ನು ಗುರಿಯಾಗಿಸಿ ಇಡಿ, ಐಟಿ, ಸಿಬಿಐ ದಾಳಿ ಮಾಡಿಸುವುದು. ನಂತರದಲ್ಲಿ ಚುನಾವಣೆ ಆಯೋಗವನ್ನೇ ಬಳಸಿಕೊಂಡು ದೇಶಾದ್ಯಂತ ಪ್ರತಿ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರದಲ್ಲಿ ಹಿಂದುಳಿದ, ಅಲ್ಪಸಂಖ್ಯಾತರ, ದಲಿತರ ಮತಗಳನ್ನು ಗುರಿಯಾಗಿಸಿಕೊಂಡು ಮತದಾರರನ್ನು ಪಟ್ಟಿಯಿಂದ ಕೈಬಿಡುವ ಕೀಳು ಮಟ್ಟದ ರಾಜಕೀಯಕ್ಕೆ ಬಿಜೆಪಿ ಸರ್ಕಾರ ಇಳಿದಿದೆ ಎಂದು ಟೀಕಿಸಿದರು.
ಕೃಷ್ಣರಾಜ ಕ್ಷೇತ್ರದಲ್ಲೂ 25 ಸಾವಿರಕ್ಕೂ ಹೆಚ್ಚು ಮತಗಳನ್ನು ಅನಧಿಕೃತವಾಗಿ ಸೇರಿಸಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ದೇಶದಲ್ಲಿ ಪಾರದರ್ಶಕವಾಗಿ ಇರಬೇಕಿರುವ ರಾಷ್ಟ್ರೀಯ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಆಡಳಿತ ಚುಕ್ಕಾಣಿ ಹಿಡಿಯಲು ಹೊರಟಿರುವುದು ಈ ದೇಶದ ದುರಂತ ಎಂದರು. 
ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದ ಬಿಜೆಪಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಕೆಟ್ಟ ಪ್ರವೃತ್ತಿ ಕೈಬಿಡಲು ಆಗ್ರಹಿಸಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ದೇಶಾದ್ಯಂತ ಹಲವಾರು ಪ್ರತಿಭಟನೆಗಳು, ಜಾಗೃತಿ ಮೂಡಿಸುತ್ತಿದ್ದು ಅವರ ಆದೇಶದಂತೆ ಮತ ಕಳ್ಳತನ ವಿರುದ್ಧ ಸಹಿ ಸಂಗ್ರಹಿಸಿ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸುವ ದೃಷ್ಟಿಯಿಂದ ಸಹಿ ಸಂಗ್ರಹ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮ್ಮಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕರಿಯಪ್ಪ, ಕೃಷ್ಣರಾಜ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಬ್ರಾರ್, ಕೆ.ಆರ್.ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಎಂ.ಆರ್.ಹೊಯ್ಸಳ, ಮುಖಂಡರಾದ ಶಶಾಂಕ್‌ಗೌಡ, ಲಖನ್, ಶೇಖರ್ ನಾಯಕ್, ಡೇರಿ ವೆಂಕಟೇಶ್, ದೀಪಕ್, ರೋಹಿತ್‌ಸಿಂಗ್, ಕಾರ್ತಿಕ್ ನಟರಾಜ್, ವಿವೇಕ್, ನಿತಿನ್, ದಿಲೀಪ್, ಪವನ್, ರಾಜೇಂದ್ರ, ರವೀಶ್, ಚಂದ್ರಶೇಖರ್, ಶಾರೂಖ್, ಪುನೀತ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net