ಯುವಕರು ಡ್ರಗ್ಸ್ ಜಾಲದಿಂದ ಹೊರಬನ್ನಿ

ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್‌ಎಸ್ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.ಎಚ್.ಶಶಿಧರ್ ಶೆಟ್ಟಿ, ನಾಗರಾಜ, ಸಿದ್ದಪ್ಪ, ವೀರಭದ್ರಯ್ಯ ಇತರರಿದ್ದರು.
ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್‌ಎಸ್ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.ಎಚ್.ಶಶಿಧರ್ ಶೆಟ್ಟಿ, ನಾಗರಾಜ, ಸಿದ್ದಪ್ಪ, ವೀರಭದ್ರಯ್ಯ ಇತರರಿದ್ದರು.
Published on

ನಂಜನಗೂಡು:

ನಮ್ಮ ಹಕ್ಕುಗಳು, ಕರ್ತವ್ಯಗಳು, ಕಾನೂನಿನ ರಕ್ಷಣೆ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ ತಿಳಿಸಿದರು.

ತಾಲೂಕಿನ ಸುತ್ತೂರಿನ ಜೆಎಸ್‌ಎಸ್ ವಸತಿ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನಿನ ಅರಿವು ಪ್ರತಿಯೊಬ್ಬ ನಾಗರಿಕನಿಗೂ ಅವಶ್ಯಕ. ಕಾನೂನು ಪ್ರಾಧಿಕಾರದ ಮುಖಾಂತರ ಉಚಿತ ಸೇವೆ ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಕರು ಡ್ರಗ್ಸ್ ಜಾಲಕ್ಕೆ ಸಿಲುಕಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಈ ಜಾಲದಿಂದ ಹೊರಬರಬೇಕು ಎಂದು ಸಲಹೆ ನೀಡಿದರು.
ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸಲು ಪೋಕ್ಸೊ ಕಾಯ್ದೆ ಜಾರಿಯಲ್ಲಿದೆ. ಮಗುವಿಗೆ ಅಸಹಜ ಅಥವಾ ಅಸುರಕ್ಷಿತ ಎನಿಸುವ ಯಾವುದೇ ವರ್ತನೆ ಕಂಡಬಂದರೆ ಪಾಲಕರು, ಶಿಕ್ಷಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ನಾಗರಾಜ, ಸಿದ್ದಪ್ಪ, ಸಹಾಯಕ ಸಂಯೋಜನಾಧಿಕಾರಿ ವೀರಭದ್ರಯ್ಯ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net