ಕನ್ನಡ ಭಾಷಾ ಪರಂಪರೆ ಸ್ವಾಭಿಮಾನದ ಪ್ರತೀಕ

ಉಪನ್ಯಾಸಕಿ ಡಿ.ಎಂ.ಪವಿತ್ರಾ ಅಭಿಪ್ರಾಯ
ಮೆಣಸಗೆರೆ ಗ್ರಾಮದ ಜ್ಞಾನ ಮುದ್ರ ವಿದ್ಯಾ ಮಂದಿರ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವವನ್ನು ಡಿ.ಎಂ.ಪವಿತ್ರಾ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಡಾ.ಸೌಮ್ಯಾ ರಾಜೇಶ್, ಕಾರ್ಯದರ್ಶಿ ಶಿವಮ್ಮ ಶಿವಕುಮಾರ್, ಟ್ರಸ್ಟಿ ತೇಜಸ್ವಿನಿ ತಿಪ್ಪಾರೇಗೌಡ, ಆಡಳಿತಾಧಿಕಾರಿ ಪ್ರಭಾವತಿ ಹಾಗೂ ಪ್ರಾಂಶುಪಾಲೆ ಕೆ.ಎಸ್.ಶ್ರುತಿ ಇದ್ದರು.
ಮೆಣಸಗೆರೆ ಗ್ರಾಮದ ಜ್ಞಾನ ಮುದ್ರ ವಿದ್ಯಾ ಮಂದಿರ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವವನ್ನು ಡಿ.ಎಂ.ಪವಿತ್ರಾ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಡಾ.ಸೌಮ್ಯಾ ರಾಜೇಶ್, ಕಾರ್ಯದರ್ಶಿ ಶಿವಮ್ಮ ಶಿವಕುಮಾರ್, ಟ್ರಸ್ಟಿ ತೇಜಸ್ವಿನಿ ತಿಪ್ಪಾರೇಗೌಡ, ಆಡಳಿತಾಧಿಕಾರಿ ಪ್ರಭಾವತಿ ಹಾಗೂ ಪ್ರಾಂಶುಪಾಲೆ ಕೆ.ಎಸ್.ಶ್ರುತಿ ಇದ್ದರು.
Published on: 

ಕೆ.ಎಂ.ದೊಡ್ಡಿ: ಕನ್ನಡ ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಅದು ನಮ್ಮ ನಾಡಿನ ಸಂಸ್ಕೃತಿ, ಇತಿಹಾಸ, ಪರಂಪರೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಮಳವಳ್ಳಿ ತಾಲೂಕಿನ ತಳಗವಾದಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕಿ ಡಿ.ಎಂ.ಪವಿತ್ರಾ ತಿಳಿಸಿದರು.

ಸಮೀಪದ ಮೆಣಸಗೆರೆ ಗ್ರಾಮದ ಜ್ಞಾನ ಮುದ್ರ ವಿದ್ಯಾಮಂದಿರ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸುವುದರ ಜತೆಗೆ ವ್ಯಕ್ತಿತ್ವ ವಿಕಸನಕ್ಕೆ ಹಲವು ಭಾಷೆಗಳ ಕಲಿಕೆ ಅಗತ್ಯ. ಇಂದಿನ ತಲೆಮಾರಿನ ವಿದ್ಯಾರ್ಥಿಗಳು ಕನ್ನಡ ಭಾಷೆಯ ಶ್ರೀಮಂತಿಕೆ, ಸಾಹಿತ್ಯ ಪರಂಪರೆ ಹಾಗೂ ನಾಡಿನ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು. ಮಾತೃಭಾಷೆ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜತೆಗೆ ಇತರ ಭಾಷೆಗಳನ್ನೂ ಕಲಿಯುವ ಮೂಲಕ ಜ್ಞಾನ ಮತ್ತು ವ್ಯಕ್ತಿತ್ವವನ್ನು ವಿಸ್ತರಿಸಿಕೊಳ್ಳಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಭಾರತಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಪುಟ್ಟಸ್ವಾಮಿಗೌಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ವಿದ್ಯಾಭ್ಯಾಸದೊಂದಿಗೆ ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ಅಭಿಮಾನದ ಗೀತೆಗಳಿಗೆ ಹಾಡಿ ನರ್ತಿಸಿ ಸಂಭ್ರಮಿಸಿದರು. ಶಿಕ್ಷಕ ವೃಂದದವರು ವಿವಿಧ ವೇಷಭೂಷಣಗಳನ್ನು ಧರಿಸಿ ಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ಮಕ್ಕಳಿಗೆ ಮನರಂಜನೆ ನೀಡಿದರು.

ಕಾರ್ಯಕ್ರಮದ ಸಂಸ್ಥೆಯ ಅಧ್ಯಕ್ಷೆ ಡಾ.ಸೌಮ್ಯಾ ರಾಜೇಶ್, ಕಾರ್ಯದರ್ಶಿ ಶಿವಮ್ಮ ಶಿವಕುಮಾರ್, ಟ್ರಸ್ಟಿ ತೇಜಸ್ವಿನಿ ತಿಪ್ಪಾರೇಗೌಡ, ಆಡಳಿತಾಧಿಕಾರಿ ಪ್ರಭಾವತಿ ಹಾಗೂ ಪ್ರಾಂಶುಪಾಲೆ ಕೆ.ಎಸ್.ಶ್ರುತಿ ಇದ್ದರು.