ಕುಡಿವ ನೀರಿಗೆ ತೊಂದರೆಯಾಗದಂತೆ ಗಮನಹರಿಸಿ

ಅಧಿಕಾರಿಗಳಿಗೆ ಶಾಸಕ ಕೆ.ವೆಂಕಟೇಶ್ ಸೂಚನೆ
ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದಲ್ಲಿ ಪ್ರಜಾ ಸೇವೆ ಆಂದೋಲನ ಸಭೆಯನ್ನು ಶಾಸಕ ಕೆ.ವೆಂಕಟೇಶ್ ಉದ್ಘಾಟಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಿಸರ್ಗಪ್ರಿಯಾ, ಸುನಿಲ್‌ಕುಮಾರ್, ಶುಭಾ ಇದ್ದರು.
ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದಲ್ಲಿ ಪ್ರಜಾ ಸೇವೆ ಆಂದೋಲನ ಸಭೆಯನ್ನು ಶಾಸಕ ಕೆ.ವೆಂಕಟೇಶ್ ಉದ್ಘಾಟಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಿಸರ್ಗಪ್ರಿಯಾ, ಸುನಿಲ್‌ಕುಮಾರ್, ಶುಭಾ ಇದ್ದರು.
Published on: 

ರಾವಂದೂರು: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಗಮನಹರಿಸಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಶಾಸಕ ಕೆ ವೆಂಕಟೇಶ್ ಸೂಚಿಸಿದರು.

ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದ ಆವರಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಹೋಬಳಿಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಜಾ ಸೇವೆ ಆಂದೋಲನದ ಮೂಲಕ ಪಡೆದುಕೊಂಡ ಅರ್ಜಿಗಳ ವಿಲೇವಾರಿಯೂ ತ್ವರಿತಗತಿಯಲ್ಲಿ ಆಯಾಯ ಇಲಾಖೆಗಳ ವತಿಯಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತಿದ್ದು ಈ ಮೂಲಕ ಇಲಾಖೆಗಳಿಗೆ ಸಾರ್ವಜನಿಕರು ಅರ್ಜಿಗಳನ್ನು ಹಿಡಿದು ಅಲೆಯುವ ಸಮಸ್ಯೆಯನ್ನು ನೀಗಿಸುವ ಸರ್ಕಾರದ ಉತ್ತಮ ಯೋಜನೆಯಾಗಿದೆ ಎಂದರು.

ರಾವಂದೂರು ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸುಮಾರು 136 ಅರ್ಜಿಗಳನ್ನು ಪಡೆಯುವ ಮೂಲಕ ಶಾಸಕರು ಸ್ಥಳದಲ್ಲೇ ಅರ್ಜಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕೊಟ್ಟಿರುವ ಸಮಸ್ಯೆಗಳನ್ನು ಅರಿತು ಬಗೆಹರಿಸುವಂತೆ ತಿಳಿಸಿದರು.

ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಬಂದಂತಹ ಸಮಸ್ಯೆಗಳು ನಿವೇಶನ, ಆಶ್ರಯ ಮನೆಗಳ ಮಂಜುರಾತಿ, ಕುಡಿಯುವ ನೀರಿನ ಸಮಸ್ಯೆ, ನಿರುದ್ಯೋಗ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಮಾಡಲು ವಿಳಂಬ, ಸರ್ವೇ ಕಾರ್ಯಕ್ಕೆ ಹಣ ನೀಡಿದರೂ ಸರ್ವೇ ವಿಳಂಬ ಮಾಡುತ್ತಿರುವುದು ಇನ್ನು ಮುಂತಾದ ಸಮಸ್ಯೆಗಳು ಹೆಚ್ಚಾಗಿ ಬಂದಿದ್ದವು. ಅಲ್ಲದೆ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ದಂಡಾಧಿಕಾರಿ ನಿಸರ್ಗಪ್ರಿಯಾ ಮಾತನಾಡಿ, ಕಳೆದ ತಿಂಗಳು ಮುಖ್ಯಮಂತ್ರಿ ಸಮ್ಮುಖದಲ್ಲಿ ತಾಲೂಕಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ 1500ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಈಗಾಗಲೇ ಬಹುತೇಕ ಎಲ್ಲ ಅರ್ಜಿಗಳ ಸಮಸ್ಯೆಗಳು ಬಗೆಹರಿಯುವ ಹಂತದಲ್ಲಿ ಇರುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಓ ಸುನಿಲ್‌ಕುಮಾರ್, ಉಪ ತಹಸೀಲ್ದಾರ್ ಶುಭಾ, ಪಿಡಿಒ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಪುಟ್ಟರಾಜು, ಕುಮಾರ್ ವಿಜಯ್, ನಂದೀಶ ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.