ಕ್ರಾಸ್ ಕಂಟ್ರಿ ಸ್ಪರ್ಧೆಗೆ ಹುಣಸೂರು ವಿದ್ಯಾರ್ಥಿ ಆಯ್ಕೆ

ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಆಯೋಜನೆ
ಟಿ.ಎನ್.ಸುಜನ್
ಟಿ.ಎನ್.ಸುಜನ್
Published on: 

ಹುಣಸೂರು: ನ.7ರಂದು ಮಂಗಳೂರಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಆಯೋಜನೆಗೊಂಡಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಚಾಂಪಿಯನ್‌ಷಿಪ್ ಸ್ಪರ್ಧೆಗೆ ಹುಣಸೂರು ನಗರದ ಡಿ.ದೇವರಾಜ ಅರಸು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿ ಟಿ.ಎನ್.ಸುಜನ್ ಮೈಸೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಟಿ.ಉದಯ್‌ಕುಮಾರ್ ತಿಳಿಸಿದ್ದಾರೆ.

ಪ್ರಾಂಶುಪಾಲ ಡಾ. ಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಟಿ.ಉದಯ್‌ಕುಮಾರ್ ಮತ್ತು ಸಹ ಪ್ರಾಧ್ಯಾಪಕರು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.