ಕ್ರೀಡೆ-ಕಲೆಗಿದೆ ವ್ಯಕ್ತಿತ್ವ ರೂಪಿಸುವ ಶಕ್ತಿ: ವಿಶ್ರಾಂತ ಕುಲಪತಿ ಡಾ.ಪಿ.ನಾಗಭೂಷಣ್

ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಸೃಜನಾ-2026 ಉದ್ಘಾಟನೆ
Sports and Art Have the Power to Shape Personality: Retired Vice-Chancellor Dr. P. Nagabhushan
ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಸೃಜನಾ-2026’ ಅನ್ನು ಡಾ.ಪಿ.ನಾಗಭೂಷಣ್ ಉದ್ಘಾಟಿಸಿದರು. ಡಾ.ಎಚ್.ಬಸವನಗೌಡಪ್ಪ, ಪ್ರೊ.ಕೆ.ಎ.ರವೀಶ್ ಇತರರು ಇದ್ದರು. ಸೃಜನಾ-2026 ಉದ್ಘಾಟನೆ
Published on

ಮೈಸೂರು:ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತಗೊಳ್ಳುತ್ತಿದ್ದು, ಸೃಜನಶೀಲ ಕಲೆಗಳನ್ನು ಮರೆಯುತ್ತಿದ್ದಾರೆ ಎಂದು ವಿಶ್ರಾಂತ ಕುಲಪತಿ ಡಾ.ಪಿ.ನಾಗಭೂಷಣ್ ಕಳವಳ ವ್ಯಕ್ತಪಡಿಸಿದರು.

ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಬನ್ನಿಮಂಟಪದಲ್ಲಿರುವ ಕೇಂದ್ರದ ಎಸ್‌ಎಲ್‌ಎಸ್‌ಎಂ ಸಭಾಂಗಣದಲ್ಲಿ ಅಯೋಜಿಸಿದ್ದ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ವಸ್ತು ಪ್ರದರ್ಶನ ‘ಸೃಜನಾ-2026’ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಮನುಷ್ಯನಿಗೆ ಸಂಸ್ಕೃತಿ ಅಗತ್ಯ. ಅದನ್ನು ಕಲೆಗಳು ಒದಗಿಸುತ್ತವೆ. ಕ್ರೀಡೆ ಮತ್ತು ಕಲೆಗೆ ಮನುಷ್ಯನ ವ್ಯಕ್ತಿತ್ವ ರೂಪಿಸುವ ಶಕ್ತಿ ಇದೆ. ಉತ್ತಮ ಭವಿಷ್ಯ ನಿರ್ಮಾಣಕ್ಕೆ ಮಾರ್ಗದರ್ಶನ ಮಾಡುತ್ತವೆ ಎಂದರು.

ವಿದ್ಯಾರ್ಥಿಗಳ ಆದ್ಯತೆಗಳು ಬದಲಾಗುತ್ತಿವೆ. ಸಂಗೀತ, ನೃತ್ಯ ಕಲಿಕೆಯಲ್ಲಿ ತೊಡಗಿಸಲು ಪ್ರತಿಯೊಬ್ಬರ ಮನಸ್ಸು ಸೃಜನಶೀಲತೆಯಿಂದ ಕೂಡಿರುವುದರಿಂದ ಅತ್ತ ಒಲವು ತೋರಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ಸ್ಪರ್ಧಾ ಮನೋಭಾವ ಹೊಂದಿರಬೇಕು. ಅಲ್ಲದೇ ನಿಜ ಜೀವನದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆಗೆ ಮುಂದಾಗಬೇಕು ಎಂದರು.

ವಿದ್ಯಾರ್ಥಿಗಳು ಓದುತ್ತಿರುವಾಗಲೇ ಕೆಲಸದ ಅನುಭವ ಪಡೆದರೆ ಪದವಿ ಮುಗಿಸಿದ ನಂತರ ಉದ್ಯೋಗ ಪಡೆಯಲು ಹೆಚ್ಚಿನ ಆತ್ಮವಿಶ್ವಾಸ ಬರುತ್ತದೆ ಎಂದರು.

ಶಿಕ್ಷಣ ಜತೆಗೆ ಸಂಸ್ಕಾರ ಮತ್ತು ಕೌಶಲ ನೀಡುತ್ತಿರುವ ಜೆಎಸ್‌ಎಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಶಿಬಿರಗಳು ಪೂರಕ ಎಂದು ಅಭಿಪ್ರಾಯಪಟ್ಟರು.

ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಕುಲಪತಿ ಡಾ.ಎಚ್.ಬಸವನಗೌಡಪ್ಪ ಮಾತನಾಡಿ, ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ಸ್ಪರ್ಧಾ ಮನೋಭಾವ ಹೊಂದಿರಬೇಕು. ಅಲ್ಲದೇ ನಿಜ ಜೀವನದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆಗೆ ಮುಂದಾಗಬೇಕು ಎಂದರು.

ಶೈಕ್ಷಣಿಕ ಪ್ರಗತಿ ಹೆಚ್ಚಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಮರ್ಪಣಾ ಮನೋಭಾವ ತೀಕ್ಷ್ಣ ಚಿಂತನೆ, ಕಷ್ಟ ಸಹಿಷ್ಣುತೆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಜೀವ ವಿಜ್ಞಾನ ವಿಭಾಗದ ಡೀನ್ ಪ್ರೊ.ಕೆ.ಎ.ರವೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net