ಗುರುಗಳ ಮಾರ್ಗದರ್ಶನ ಜೀವನಕ್ಕೆ ದಾರಿದೀಪ

ನಿವೃತ ಶಿಕ್ಷಕ ಎ.ಎನ್ ಶಿವಣ್ಣ ಅಭಿಪ್ರಾಯ
ಬೆಟ್ಟದಪುರ ಸಮೀಪದ ಭುವನಹಳ್ಳಿಯ ಮೂರೂರಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ 1996ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಎ.ಎನ್ ಶಿವಣ್ಣ, ಡಿ.ಎಂ ಸರೋಜಾ, ಎಸ್.ಯೋಗೇಶ್, ಆರ್.ವೆಂಕಟೇಶ್, ಎಂ.ಕೆ ಕೃಷ್ಣೇಗೌಡ, ರಂಗರಾಜು ಇತರರು ಇದ್ದರು.
ಬೆಟ್ಟದಪುರ ಸಮೀಪದ ಭುವನಹಳ್ಳಿಯ ಮೂರೂರಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ 1996ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಎ.ಎನ್ ಶಿವಣ್ಣ, ಡಿ.ಎಂ ಸರೋಜಾ, ಎಸ್.ಯೋಗೇಶ್, ಆರ್.ವೆಂಕಟೇಶ್, ಎಂ.ಕೆ ಕೃಷ್ಣೇಗೌಡ, ರಂಗರಾಜು ಇತರರು ಇದ್ದರು.
Published on: 

ಬೆಟ್ಟದಪುರ: ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಗುರುಗಳು ನೀಡುವ ಶಿಕ್ಷಣ, ಸಂಸ್ಕಾರ ಮತ್ತು ಮಾರ್ಗದರ್ಶನ ಜೀವನದುದ್ದಕ್ಕೂ ದಾರಿ ದೀಪವಾಗಿರುತ್ತದೆ ಎಂದು ನಿವೃತ ಶಿಕ್ಷಕ ಎ.ಎನ್. ಶಿವಣ್ಣ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಭುವನಹಳ್ಳಿ ಗ್ರಾಮದ ಮೂರೂರಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ 1996ನೇ ಸಾಲಿನ ಹಿರಿಯ ವಿದ್ಯಾರ್ಥಿಗಳಿಂದ ಶನಿವಾರ ಆಯೋಜಿಸಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾಭ್ಯಾಸ ಮಾಡಿದ ಶಾಲೆ ಹಾಗೂ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಗೌರವಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಗುರುಭಕ್ತಿ ಮತ್ತು ಸ್ನೇಹಭಾವವನ್ನು ಹೆಚ್ಚಿಸುತ್ತವೆ. ಹಳೆಯ ವಿದ್ಯಾರ್ಥಿಗಳು ಹಲವು ವರ್ಷಗಳ ಬಳಿಕ ಒಂದೆಡೆ ಸೇರಿ ಗುರುಗಳನ್ನು ಗೌರವಿಸುತ್ತಿರುವುದು ಸಂತಸದ ಸಂಗತಿ ಎಂದರು.

ಶಾಲೆಯ ಮುಖ್ಯಶಿಕ್ಷಕಿ ಡಿ.ಎಂ ಸರೋಜಾ ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಕಲಿತ ಶಾಲೆಯೊಂದಿಗೆ ನಿರಂತರ ಸಂಪರ್ಕ ಹೊಂದುವುದರ ಜತೆಗೆ ಶಾಲೆಯ ಅಭಿವೃದ್ಧಿಗೂ ಕೈಜೋಡಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸಾಧನೆ ಮಾಡುವುದರೊಂದಿಗೆ ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸಬೇಕು ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಹಿರಿಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೂರೂರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶಾಲೆಯ ಪ್ರವೇಶದ್ವಾರದಲ್ಲಿ ಹಿರಿಯ ಶಿಕ್ಷಕರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. 1996ನೇ ಸಾಲಿನ ವಿದ್ಯಾರ್ಥಿಗಳು ಶಾಲೆಗೆ ಕೊಡುಗೆಯಾಗಿ ನೀಡಿದ ಕೊಲಾಪ್ಸ್ ಗೇಟ್ ಉದ್ಘಾಟಿಸಲಾಯಿತು. ನಂತರ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವ ಸಮರ್ಪಿಸಲಾಯಿತು. ಹಲವು ವರ್ಷಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಿ ಸ್ನೇಹ ಸಮ್ಮಿಲನದಲ್ಲಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ಎಸ್.ಯೋಗೇಶ್, ಆರ್.ವೆಂಕಟೇಶ್, ಎಂ.ಕೆ ಕೃಷ್ಣೇಗೌಡ, ರಂಗರಾಜು, ಪ್ರಕಾಶ್, ಎಸ್.ರವಿಕುಮಾರ್, ಶಾಂತಕುಮಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೇಖರ್, ಉಪಾಧ್ಯಕ್ಷೆ ಶೋಭಾ, ಸಮಿತಿ ಸದಸ್ಯರಾದ ದೀಪು ಗಿರೀಶ್, ಪೂರ್ಣಿಮಾ, ನಾಗೇಂದ್ರ, ಹೇಮಾಪ್ರಭಾ ಹರೀಶ್, ಸುಮಾ, ಶಿಕ್ಷಕರಾದ ವಿಜಯಕುಮಾರ್, ನರಸಿಂಹಮೂರ್ತಿ, ತಿಪ್ಪೇಸ್ವಾಮಿ, ಅನುಪಮಾ, ರಾಕೇಶ್, ಜಲಜಾಕ್ಷಿ, ತ್ರಿವೇಣಿ ಸೇರಿದಂತೆ 1996ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರು, ಪಾಲಕರು ಹಾಗೂ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳು ಇದ್ದರು.