ಗ್ರಾಮೀಣರಿಗೆ ವರವಾದ ಭೂ-ಗ್ಯಾರಂಟಿ

ಪಿಡಿಒ ಎಚ್.ಡಿ ಮಂಜುನಾಥ್ ಹೇಳಿಕೆ
 ಮಾಲೀಕರಿಗೆ ಭಿತ್ತಿಪತ್ರಗಳನ್ನು ವಿತರಿಸಲಾಯಿತು
ಬೆಟ್ಟದಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನೇಗೌಡನಕೊಪ್ಪಲಿನಲ್ಲಿ ಭೂ-ಗ್ಯಾರಂಟಿ ಯೋಜನೆಯಡಿ ಗ್ರಾಮಠಾಣಾ ವ್ಯಾಪ್ತಿಗೆ ಒಳಪಡುವ ಮನೆಗಳ ಮಾಲೀಕರಿಗೆ ಭಿತ್ತಿಪತ್ರಗಳನ್ನು ವಿತರಿಸಲಾಯಿತು.
Published on: 

ಬೆಟ್ಟದಪುರ: ಗ್ರಾಮೀಣ ಪ್ರದೇಶಗಳ ಮನೆ ಮಾಲೀಕರಿಗೆ ಆಸ್ತಿಯ ಅಧಿಕೃತ ದಾಖಲೆ ಒದಗಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಭೂ-ಗ್ಯಾರಂಟಿ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಟ್ಟದಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಡಿ ಮಂಜುನಾಥ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನೇಗೌಡನಕೊಪ್ಪಲು ಗ್ರಾಮದಲ್ಲಿ ಇತ್ತಿಚೇಗೆ ಭೂ ಗ್ಯಾರಂಟಿ ಯೋಜನೆಯಡಿ ಗ್ರಾಮಠಾಣಾ ವ್ಯಾಪ್ತಿಗೆ ಒಳಪಡುವ ಮನೆಗಳ ಮಾಲೀಕರಿಗೆ ಭಿತ್ತಿಪತ್ರ ವಿತರಿಸಿ, ಮನೆ ಹಾಗೂ ಕಟ್ಟಡಗಳ ಅಳತೆ ಕಾರ್ಯ ಕೈಗೊಂಡ ವೇಳೆ ಮಾತನಾಡಿದ ಅವರು, ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಮತ್ತು ಕಟ್ಟಡಗಳನ್ನು ಸಮರ್ಪಕವಾಗಿ ಅಳತೆ ಮಾಡಿ, ಆಸ್ತಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರಿಂದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿಯ ಹಕ್ಕು ಮತ್ತು ದಾಖಲೆಗಳನ್ನು ಪಡೆಯಲು ಅನುಕೂಲವಾಗಲಿದೆ. ಆದ್ದರಿಂದ ಗ್ರಾಮಸ್ಥರು ಅಳತೆ ಕಾರ್ಯಕ್ಕೆ ಸಹಕರಿಸಿ, ಅಗತ್ಯ ಮಾಹಿತಿ ಒದಗಿಸಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸಿಬ್ಬಂದಿ ಶ್ರೀನಿಧಿ, ಮಂಜು , ಸರ್ವೇ ಸಿಬ್ಬಂದಿ ಉಪಸ್ಥಿತರಿದ್ದರು.