‘ಚಿತ್ರಕಲೆ’ ಮಕ್ಕಳ ಪರಿಸರ ಪ್ರಜ್ಞೆಗೆ ಸಹಕಾರಿ

Painting helps children develop environmental awareness
ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ  ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಯಿತು.  ಮಂಜು, ಕುಮಾರಸ್ವಾಮಿ,ಶಿವಕುಮಾರ್ ಇತರರಿದ್ದರು.
ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಯಿತು. ಮಂಜು, ಕುಮಾರಸ್ವಾಮಿ,ಶಿವಕುಮಾರ್ ಇತರರಿದ್ದರು.
Published on: 

ಹನಗೋಡು: ಚಿತ್ರಕಲೆಯಂತಹ ಸೃಜನಾತ್ಮಕ ಚಟುವಟಿಕೆಗಳು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹುಣಸೂರು ವಲಯ ಅರಣ್ಯಧಿಕಾರಿ ಮಂಜು ತಿಳಿಸಿದರು.

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಅರಣ್ಯ ಇಲಾಖೆ ವತಿಯಿಂದ 72ನೇ ವನ್ಯಜೀವಿ ಸಪ್ತಾಹ ಅಂಗವಾಗಿ ’ವನ್ಯಜೀವಿ ಬಗ್ಗೆ ತಿಳಿದುಕೊಳ್ಳಿ’ ಎಂಬ ವಿಷಯದ ಕುರಿತು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ವನ್ಯಜೀವಿಗಳ ಆವಾಸಸ್ಥಾನ ಉಳಿಸಿದಲ್ಲಿ ಮಾತ್ರ ಸಂಪದ್ಭರಿತ ಅರಣ್ಯ ಮತ್ತು ವನ್ಯಜೀವಿಗಳ ಜೀವನ ಸಾಧ್ಯ. ಅರಣ್ಯ ಒತ್ತುವರಿಯಂತಹ ಕಾರ್ಯಗಳಿಂದ ನಾವು ದೂರಾಗಬೇಕಿದೆ. ಪ್ರಾಣಿಗಳನ್ನು ಅವುಗಳ ಪಾಡಿಗೆ ಬದುಕಲು ಬಿಟ್ಟಲ್ಲಿ ಮನುಷ್ಯನಿಗೆ ಲಾಭವೇ ಹೊರತು ನಷ್ಟವಲ್ಲ. ಆದ್ದರಿಂದ ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿದ್ದು, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮುಖ್ಯಶಿಕ್ಷಕ ಕುಮಾರಸ್ವಾಮಿ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಿಂದಲೇ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಮೂಲಕ ಮುಂದಿನ ಪೀಳಿಗೆಗೆ ಪ್ರಕೃತಿ ಸಂಪತ್ತನ್ನು ಉಳಿಸಿ ಸದೃಢ ಭಾರತ ನಿರ್ಮಾಣ ಮಾಡಬೇಕಾಗಿದೆ ಎಂದರು.

ಚಿತ್ರಕಲಾಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವನ್ಯಜೀವಿ, ಅರಣ್ಯ ಹಾಗೂ ಪ್ರಕೃತಿ ಸಂರಕ್ಷಣೆಯ ಕುರಿತ ತಮ್ಮ ಕಲ್ಪನೆಗಳನ್ನು ಬಣ್ಣಗಳ ಮೂಲಕ ಸುಂದರವಾಗಿ ಮೂಡಿಸಿದರು.

ಸ್ಪರ್ಧೆಯಲ್ಲಿ ಅನನ್ಯ ಪ್ರಥಮ, ಲೇಖನ ದ್ವಿತೀಯ ಹಾಗೂ ಸ್ಫೂರ್ತಿ ತೃತೀಯ ಸ್ಥಾನ ಪಡೆದುಕೊಂಡರು.

ವಿಜೇತರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಕಚುವಿನಹಳ್ಳಿ ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್, ಗಸ್ತು ಅರಣ್ಯ ಪಾಲಕರಾದ ಅಕ್ಷಯ್ ಕುಮಾರ್, ಶಂಕರ್, ಶಾಲೆಯ ಸಹಶಿಕ್ಷಕಿ ಪ್ರೀತಿ ಸೇರಿದಂತೆ , ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net