ಪೌರಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಲಿ

ಶಾಸಕ ದರ್ಶನ್ ಧ್ರುವನಾರಾಯಣ ಸಲಹೆ
ನಂಜನಗೂಡಿನ ನಂದಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾಸಲಾಯಿತು. ಶಾಸಕ ದರ್ಶನ್, ಬಸವರಾಜು, ಡಿ.ಆರ್. ರಾಜು, ಸಿ.ಎಂ.ಶಂಕರ್ ಇತರರು ಇದ್ದರು.
ನಂಜನಗೂಡಿನ ನಂದಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾಸಲಾಯಿತು. ಶಾಸಕ ದರ್ಶನ್, ಬಸವರಾಜು, ಡಿ.ಆರ್. ರಾಜು, ಸಿ.ಎಂ.ಶಂಕರ್ ಇತರರು ಇದ್ದರು.
Published on: 

ನಂಜನಗೂಡು: ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಸಲಹೆ ನೀಡಿದರು.

ನಗರಸಭೆಯಿಂದ ಮಂಗಳವಾರ ನಗರದ ನಂದಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತಾನಾಡಿದರು.

ಪೌರ ಕಾರ್ಮಿಕರೇ ನಗರದ ಬೆಳಕು. ಅವರು ಒಂದು ದಿನ ತಮ್ಮ ಕೆಲಸ ನಿರ್ವಹಿಸದೆ ಇದ್ದರೆ ನಗರದಲ್ಲಿ ವಾಸಮಾಡಲು ಸಾಧ್ಯವಿಲ್ಲ. ಸೂರ್ಯೋದಯಕ್ಕೂ ಮುನ್ನವೇ ನಗರವನ್ನು ಸ್ವಚ್ಛಗೊಳಿಸುವ ಬರದಲ್ಲಿ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಬಾರದು. ನಗರದಲ್ಲಿ ಪ್ರತಿ ಶನಿವಾರ ನಡೆಯುವ ಪ್ರಜಾಸೇವಾ ಆಂದೊಲನ ಸಭೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗುತ್ತದೆ. ಅಲ್ಲಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿ. ಅಲ್ಲದೆ ವರ್ಷದಲ್ಲಿ ಮೂರ್ನಾಲ್ಕು ಬಾರಿ ಆರೋಗ್ಯ ಉಚಿತ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಈ ಶಿಬಿರಗಳನ್ನುಪೌರಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಹಲವು ಕಾರ್ಮಿಕರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ.ದುಶ್ಚಟಗಳಿಂದ ದೂರವಿದ್ದು, ಮಕ್ಕಳ ಉತ್ತಮ ವಿದ್ಯಾಭ್ಯಾಸದತ್ತ ಗಮನ ಹರಿಸಬೇಕು ಕಿವಿಮಾತು ತಿಳಿಸಿದರು.

ನಗರಸಭೆಯ ಪೌರಾಯುಕ್ತ ಬಸವರಾಜು ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಟಿಎಪಿಸಿಎಂಸಿ ಅಧ್ಯಕ್ಷ ಕುರಹಟ್ಟಿ ಮಹೇಶ್, ಮಾಜಿ ನಗರಸಭಾ ಅಧ್ಯಕ್ಷ ಶ್ರೀ ಕಂಠಸ್ವಾಮಿ, ನಗರಸಭಾ ಪೌರಾಯುಕ್ತ ಬಸವರಾಜ್, ಸಫಾಯಿ ಕರ್ಮಚಾರಿ ಸಂಘದ ಅಧ್ಯಕ್ಷ ಡಿ.ಆರ್. ರಾಜು, ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ.ಶಂಕರ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸವೇಗೌಡ, ಮಹದೇವ ಪ್ರಸಾದ್, ಮುಖಂಡರು ಹಾಗೂ ಪೌರಕಾರ್ಮಿಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net