ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಧಿಕಾರಿಗಳ ತಂಡ ಭೇಟಿ

ಹುಣಸೂರು ತಾಲೂಕು ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಲೇರಿಯಾ ನಿರ್ಮೂಲನಾ ಪರಿಶೀಲನಾ ತಂಡದ ಸದಸ್ಯರಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಸನ್ಮಾನಿಸಲಾಯಿತು. ಡಾ.ಜೆ.ಪ್ರತಿಭಾ, ಡಾ.ಗಿರಿದಾಸ್, ಡಾ.ಸಿ.ಪವಿತ್ರಾ, ರಾಜೇಶ್ವರಿ ಇತರರಿದ್ದರು.
ಹುಣಸೂರು ತಾಲೂಕು ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಲೇರಿಯಾ ನಿರ್ಮೂಲನಾ ಪರಿಶೀಲನಾ ತಂಡದ ಸದಸ್ಯರಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಸನ್ಮಾನಿಸಲಾಯಿತು. ಡಾ.ಜೆ.ಪ್ರತಿಭಾ, ಡಾ.ಗಿರಿದಾಸ್, ಡಾ.ಸಿ.ಪವಿತ್ರಾ, ರಾಜೇಶ್ವರಿ ಇತರರಿದ್ದರು.
Published on: 

ಹುಣಸೂರು: ತಾಲೂಕಿನ ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಷ್ಟ್ರೀಯ ಮಲೇರಿಯಾ ನಿರ್ಮೂಲನಾ ಪರಿಶೀಲನಾ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.

ನವದೆಹಲಿಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಇಲಾಖೆಯ ನಿರ್ದೇಶಕಿ ಡಾ.ಕಲ್ಪನಾ ಬರೂಹ ನೇತೃತ್ವದ ತಂಡ ಇತ್ತೀಚೆಗೆ ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರವು ಮಲೇರಿಯಾ ನಿರ್ಮೂಲನೆಗೆ ಕೈಗೊಂಡ ಕ್ರಮಗಳ ಕುರಿತಾದ ಮಾಹಿತಿ ಮತ್ತು ದಾಖಲೆಗಳನ್ನು ಪರಿಶೀಲಿಸಿತು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೆ.ಪ್ರತಿಭಾ ಮೈಸೂರು ಜಿಲ್ಲೆಯಲ್ಲಿ ಮಲೇರಿಯ ನಿರ್ಮೂಲನೆಗಾಗಿ ಇಲಾಖೆ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ತಂಡಕ್ಕೆ ವಿವರಿಸಿದರು.

ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯಕೇಂದ್ರ ವ್ಯಾಪ್ತಿಯಲ್ಲಿ ವಲಸೆ ಜನಾಂಗದ ಜನರು ಆಗಮಿಸಿರುವುದನ್ನು ಪತ್ತೆ ಹಚ್ಚಿ ಅಂತಹ ಜನರಿಗೆ ಸೊಳ್ಳಗಳು ಕಚ್ಚುವುದರಿಂದ ಹರಡುವ ರೋಗಗಳಾದ ಮಲೇರಿಯ, ಮಿದುಳು ಜ್ವರ, ಆನೆಕಾಲು ರೋಗ, ಚಿಕೂನ್ ಗುನ್ಯಾ ಮತ್ತು ಡೆಂಘೆ ಜ್ವರ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ನಿರಂತರ ತಪಾಸಣೆ ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ನಿರಂತರ ಮತ್ತು ಪರಿಣಾಮಕಾರಿಯಾಗಿ ಆಯೋಜಿಸುತ್ತಿರುವ ಕುರಿತು ತಂಡಕ್ಕೆ ಮಾಹಿತಿ ನೀಡಿದರು.

ಇದೇ ವೇಳೆ ಇಡೀ ತಂಡವನ್ನು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ತಂಡದ ಸದಸ್ಯರಾದ ಪುದುಚೇರಿ ರಾಜ್ಯದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ತೇನಂಬಿಗೈ, ಡಾ.ಬಿಜಿತ್ ಬಿಸ್ವಾಸ್, ಒಡಿಶಾದ ಡಾ.ಶ್ಯಾಮ್ ಬಂಧುರಾತ್, ತಾಲೂಕು ಆರೋಗ್ಯಾಧಿಕಾರಿ ಡಾ.ಗಿರಿದಾಸ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿ.ಪವಿತ್ರಾ, ತಾಲುಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರು, ತಾಲೂಕು ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net